ತಿರುವನಂತಪುರ: ರಾಜ್ಯದಲ್ಲಿ ದ್ವಿತೀಯ ವರ್ಷದ ಹೈಯರ್ ಸೆಕೆಂಡರಿ ಪರೀಕ್ಷೆಯ ಮೌಲ್ಯಮಾಪನವನ್ನು ಮುಂದೂಡಲಾಗಿದೆ. ಮೇ 5 ರಂದು ಪ್ರಾರಂಭವಾಗಬೇಕಿದ್ದ ಮೌಲ್ಯಮಾಪನವನ್ನು ಮುಂದೂಡಲಾಗಿದೆ. ಹೊಸ ದಿನಾಂಕವನ್ನು ಬಳಿಕ ಪ್ರಕಟಿಸಲಾಗುವುದು ಎಂದು ಅಧಿಕೃತರು ತಿಳಿಸಿದ್ದಾರೆ. ಥಿಯರಿ ಪರೀಕ್ಷೆಗಳ ಮೌಲ್ಯಮಾಪನವು ಮೇ 5 ರಂದು ನಡೆಯಬೇಕಿತ್ತು. ತೀವ್ರವಾದ ಕೊರೋನಾದ ಹಿನ್ನೆಲೆಯಲ್ಲಿ ವಿವಿಧ ಪ್ರದೇಶಗಳಿಂದ ಶಿಕ್ಷಕರನ್ನು ಮೌಲ್ಯಮಾಪನ ಕೇಂದ್ರಕ್ಕೆ ಕರೆಸಲು ಕಷ್ಟವಾಗುವುದನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಸ್‍ಎಸ್‍ಎಲ್‍ಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಲಾಗಿದೆ.
ಸೋಂಕು ಹರಡುವ ಆರಂಭಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಯಿತು. ಪ್ರಸ್ತುತ ಎಲ್ಲಾ ಪರೀಕ್ಷೆಗಳು ಪೂರ್ಣಗೊಂಡಿವೆ. ಎಲ್ಲಾ ಶಾಲೆಗಳಲ್ಲಿ ಕೊರೋನಾ ಪಾಸಿಟಿವ್ ಮಕ್ಕಳಿಗೆ ವಿಶೇಷ ಆಸನ ವ್ಯವಸ್ಥೆ ಇತ್ತು. ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕರೆತರಲು ಮತ್ತು ಕರೆದೊಯ್ಯಲು ಸಮರ್ಪಕ ವ್ಯವಸ್ಥೆ ಮಾಡಲಾಗಿತ್ತು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.