ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಶಾಲಾ ಪ್ರವೇಶೋತ್ಸವ ಸಂಬಂಧ ಸಿದ್ಧತೆಗಳು ಪೂರ್ಣಗೊಂಡಿವೆ.
ಜಿಲ್ಲೆಯ 7 ಉಪಜಿಲ್ಲಾ ಮಟ್ಟಗಳಲ್ಲೂ ನಡೆಯುವ ಪ್ರವೇಶೋತ್ಸವ ಸಮಾರಂಭಗಳಲ್ಲಿ ಜನಪ್ರತಿನಿಧಿಗಳು, ಸಿಬ್ಬಂದಿ ಭಾಗವಹಿಸುವರು ಎಂದು ಜಿಲ್ಲಾ ಶಿಕ್ಷಣ ಸಹಾಯಕ ನಿರ್ದೇಶಕಿ ಕೆ.ವಿ.ಪುಷ್ಪಾ ತಿಳಿಸಿದರು.
ಕಾಞಂಗಾಡು ಸೌತ್ ಸರಕಾರಿ ಪೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರುಗುವ ಸಮಾರಂಭದಲ್ಲಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರು, ಕಾಡಂಗೋಡು ಸರಕಾರಿ ನುಗಾರಿಕೆ ಶಾಲೆಯಲ್ಲಿ ಜರುಗುವ ಸಮಾರಂಭದಲ್ಲಿ ಶಾಸಕ ಎಂ.ರಾಜಗೋಪಾಲನ್ ಅವರು, ಕಾಞಂಗಾಡು ಸರ್ಕಾರಿ ಪೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯುವ ಸಮಾರಂಭದಲ್ಲಿ , ಪಾಣತ್ತೂರು ಜಿ.ಡಬ್ಲ್ಯೂ, ಹೈಯರ್ಸ ಸೆಕೆಂಡರಿ ಶಾಲೆ ಮತ್ತು ಚಾಯೋತ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಗಳಲ್ಲಿ ಜರುಗುವ ಸಮಾರಂಭಗಳಲ್ಲಿ ಶಾಸಕ ಇ.ಚಂದ್ರಶೇಖರನ್, ಶಾಸಕ ನ್ಯಾಯವಾದಿ ಸಿ.ಎಚ್.ಕುಂಞಂಬು ಅವರು ಅಡೂರು ಪೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರುಗುವ ಸಮಾರಂಭದಲ್ಲಿ, ಶಾಸಕ ಎನ್.ಎ.ನೆಲ್ಲಿಕುನ್ನು ಅವರು ನೆಲ್ಲಿಕಂಜೆ ಎ.ಎ.ಯು.ಪಿ.ಶಾಲೆಯಲ್ಲಿ, ಶಾಸಕ ಎ.ಕೆ.ಎಂ.ಅಶ್ರಫ್ ಅವರು ಬಂಗ್ರ ಮಂಜೇಶ್ವರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ಮತ್ತು ಕುಂಬಳೆ ಸರ್ಕಾರಿ ಪೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರುಗುವ ಸಮಾರಂಭಗಳಲ್ಲಿ ಭಾಗವಹಿಸುವರು. ಇತರ ಕಡೆಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ವಿವಿಧ ಜನಪ್ರತಿನಿಧಿಗಳು ಭಾಗವಹಿಸುವರು.