ಮುಂಬೈ : ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗಕ್ಕೆ ಮಹಾರಾಷ್ಟ್ರ ರಾಜ್ಯದಲ್ಲಿ ಪ್ರತಿನಿತ್ಯ ಪತ್ತೆಯಾಗುವ ಸೋಂಕಿತ ಪ್ರಕರಣಗಳೇ ಸಾಕ್ಷಿ ಎನ್ನುವಂತಾ ಸ್ಥಿತಿ ಇದೀಗ ದೇಶದಲ್ಲಿ ನಿರ್ಮಾಣವಾಗಿ ಬಿಟ್ಟಿದೆ.
ಮಹಾರಾಷ್ಟ್ರ ರಾಜ್ಯವೊಂದರಲ್ಲೇ ಒಂದು ದಿನದಲ್ಲಿ 62194 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ 853 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು,63,842 ಸೋಂಕಿತರು ಗುಣಮುಖರಾಗಿದ್ದಾರೆ.
ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 49,42,736 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೂ 42,27,940 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ 73,515 ಜನರು ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 6,39,075 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಮುಂಬೈನಲ್ಲೇ 3056 ಮಂದಿಗೆ ಕೊರೊನಾವೈರಸ್:
ಮಹಾರಾಷ್ಟ್ರದ ಅಂಕಿಸಂಖ್ಯೆಗಳಿಗೆ ಹೋಲಿಸಿದ್ದಲ್ಲಿ ಮುಂಬೈನಲ್ಲಿ ಪತ್ತೆಯಾದ ಕೊವಿಡ್-19 ಪ್ರಕರಣಗಳ ಸಂಖ್ಯೆ ತೀರಾ ಕಡಿಮೆ ಎನಿಸುತ್ತದೆ. ಕಳೆದ 24 ಗಂಟೆಗಳಲ್ಲಿ 3056 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 6,68,355ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 69 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 13,616ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ 50,606 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.