ಕಾಸರಗೋಡು : ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರ ಸ್ಥಳೀಯ ಅಭಿವೃದ್ಧಿ ನಿಧಿಯಿಂದ 44,03,013 ರೂ. ವೆಚ್ಚದಲ್ಲಿ ಮೂರು ಆಂಬುಲೆನ್ಸ್ ಖರೀದಿಸುವ ಯೋಜನೆಗೆ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಆಡಳಿತಾನುಮತಿ ನೀಡಿದರು.
ಕಾಸರಗೋಡು ಜನರಲ್ ಆಸ್ಪತ್ರೆ, ಮಂಗಲ್ಪಾಡಿ ತಾಲೂಕು ಆಸ್ಪತ್ರೆ, ಮುಳಿಯಾರು ಸಮುದಾಯ ಆರೋಗ್ಯ ಕೇಂದ್ರ ಗಳಿಗಾಗಿ ಮೂರು ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು.