HEALTH TIPS

ಲಕ್ಷದ್ವೀಪ ಜನರ ಪ್ರತಿಭಟನೆಗೆ ಬೆಂಬಲ: ಕೇರಳ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಸಿಎಂ ಪಿಣರಾಯಿ ವಿಜಯನ್

            ತಿರುವನಂತಪುರದ್ವೀಪ ಆಡಳಿತದ ಇತ್ತೀಚಿನ ಕ್ರಮದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಲಕ್ಷದ್ವೀಪ ಜನರಿಗೆ ಬೆಂಬಲ ಸೂಚಕವಾಗಿ ಕೇರಳ ವಿಧಾನಸಭೆಯಲ್ಲಿ ಸೋಮವಾರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಣಯ ಹೊರಡಿಸಿದರು.

          ದ್ವೀಪ ಸಮೂಹದಲ್ಲಿನ ಸ್ಥಳೀಯ ಜೀವನಶೈಲಿ ಮತ್ತು ಪರಿಸರ ವ್ಯವಸ್ಥೆಯನ್ನು ನಾಶಮಾಡುವ ಮತ್ತು ಹಿಂಬಾಗಿಲಿನ ಮೂಲಕ 'ಕೇಸರಿ ಕಾರ್ಯಸೂಚಿಯನ್ನು' ಜಾರಿಗೆ ತರುವ ಪ್ರಯತ್ನ ಲಕ್ಷದ್ವೀಪದಲ್ಲಿ ನಡೆಯುತ್ತಿದೆ, ಈ ಮೂಲಕ ಸ್ಥಳೀಯ ಜನರ ಜೀವನದ ಹಕ್ಕನ್ನು ನಿಯಂತ್ರಿಸಲಾಗುತ್ತಿದೆ. ಈ ಅಜೆಂಡಾದ ಭಾಗವಾಗಿ ಒಂದು ಉದಾಹರಣೆಯಾಗಿ ನಾವು ಅಲ್ಲಿ ತೆಂಗಿನ ಮರಗಳನ್ನು ಕೇಸರಿ ಬಣ್ಣದಿಂದ ಚಿತ್ರಿಸಿರುವುದನ್ನು ಕಾಣಬಹುದು, ಇದನ್ನು ನಾವು ವಿರೋಧಿಸುತ್ತೇವೆ ಎಂದು ವಿಧಾನಸಭೆಯಲ್ಲಿ ಇಂದು ನಿರ್ಣಯ ಹೊರಡಿಸಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿಕೆ ನೀಡಿದರು.

          ಲಕ್ಷದ್ವೀಪದಲ್ಲಿ ಕೇಸರಿ ಕಾರ್ಯಸೂಚಿ ಮತ್ತು ಸಾಂಸ್ಥಿಕ ಹಿತಾಸಕ್ತಿಗಳನ್ನು ಹೇರಲು ಮತ್ತು ಜಾರಿಗೆ ತರಲು ಪ್ರಯತ್ನ ನಡೆಯುತ್ತಿದೆ ಎಂದು ಪಿಣರಾಯಿ ವಿಜಯನ್ ಆರೋಪಿಸಿದರು. ಕೇಂದ್ರ ಸರ್ಕಾರ ತಕ್ಷಣವೇ ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸಬೇಕು, ಲಕ್ಷದ್ವೀಪ ಜನರ ಹಿತಾಸಕ್ತಿ ಕಾಪಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದರು.

         ಕಳೆದ ತಿಂಗಳು ಏಪ್ರಿಲ್ 6ರಂದು ನಡೆದ ವಿಧಾಸಭೆ ಚುನಾವಣೆಯಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿಎಫ್ ಸರ್ಕಾರ ಬಂದ ಮತ್ತೊಮ್ಮೆ ಅಧಿಕಾರಕ್ಕೆ ಬಂದ ಮೇಲೆ ವಿಧಾನಸಭೆಯಲ್ಲಿ ಮಂಡಿಸಲಾದ ಮೊದಲ ನಿರ್ಣಯವಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries