HEALTH TIPS

ಸಿವಿಲ್‌ ಇಂಜಿನಿಯರಿಂಗ್‌ ಪದವೀಧರರಾ? ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅರ್ಜಿ ಆಹ್ವಾನ

         ನ್ಯಾಷನಲ್​ ಹೈವೇಸ್​ ಅಥಾರಿಟಿ ಆಫ್​ ಇಂಡಿಯಾದಲ್ಲಿ (ಎನ್​ಎಚ್​ಎಐ) ಸಿವಿಲ್​ ಇಂಜಿನಿಯರಿಂಗ್​ ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಗೇಟ್​ ಪರೀಕ್ಷೆ 2021ರ ಅಂಕ ಆಧರಿಸಿ ನೇಮಕ ಮಾಡಿಕೊಳ್ಳಲಾಗುವುದು.

             ಒಟ್ಟು ಹುದ್ದೆಗಳು: 41

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ
ಸಿವಿಲ್​ ಇಂಜಿನಿಯರ್​ ಅಗತ್ಯತೆ
* ಡೆಪ್ಯುಟಿ ಮ್ಯಾನೇಜರ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

            ಅಭ್ಯರ್ಥಿಗಳು ಆನ್​ಲೈನ್​ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಿದ್ದು, ಇತರೆ ಯಾವುದೇ ವಿಧಾನದಲ್ಲಿ ಬಂದ ಅರ್ಜಿಗಳಿಗೆ ಮಾನ್ಯತೆ ಇಲ್ಲ. ಮೀಸಲಾತಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಕೊನೇ ದಿನದ ವರೆಗೆ ಕಾಯದೇ ಮುಂಚಿತವಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರತಿಯೊಂದನ್ನು ತಮ್ಮ ಬಳಿ ಇರಿಸಿಕೊಳ್ಳುವಂತೆ ಸೂಚಿಸಲಾಗಿದೆ. ಅಂಗವಿಕಲ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಇತ್ತೀಚಿನ ಅಂಗವಿಕಲ ಪ್ರಮಾಣಪತ್ರ ಸಲ್ಲಿಸಬೇಕು. ಅಂಗವಿಕಲತೆಯು ಶೇ.40ಕ್ಕಿಂತ ಹೆಚ್ಚಿರಬಾರದು ಎಂದು ಸೂಚಿಸಲಾಗಿದೆ.

           ಹುದ್ದೆ ವಿವರ
* ಡೆಪ್ಯುಟಿ ಮ್ಯಾನೇಜರ್​ (ಟೆಕ್ನಿಕಲ್​) & 41

ಶೈಕ್ಷಣಿಕ ಅರ್ಹತೆ: ಸಿವಿಲ್​ ಇಂಜಿನಿಯರಿಂಗ್​ನಲ್ಲಿ ಪದವಿ ಮಾಡಿರಬೇಕು. 2021ರ ಗೇಟ್​ ಪರೀೆಯ ಅಂಕ ಆಧರಿಸಿ ಆಯ್ಕೆ ಮಾಡಲಾಗುವುದು. ಅಂತಿಮ ವರ್ಷ/ ಸೆಮಿಸ್ಟರ್​ನಲ್ಲಿ ಅಧ್ಯಯನ ಮಾಡುತ್ತಿದ್ದು, ಕೋವಿಡ್​ ಹಿನ್ನೆಲೆಯಲ್ಲಿ ಲಿತಾಂಶ ಪ್ರಕಟವಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಮೀಸಲಾತಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದನ್ವಯ ವಯೋ ಸಡಿಲಿಕೆ ನೀಡಲಾಗುವುದು.

ಮೀಸಲಾತಿ: ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 18 ಸ್ಥಾನ, ಎಸ್ಸಿಗೆ 6, ಎಸ್ಟಿಗೆ 4, ಇತರ ಹಿಂದುಳಿದ ವರ್ಗಕ್ಕೆ 10, ಆಥಿರ್ಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 3 ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಇದರಲ್ಲಿ 2 ಸ್ಥಾನಗಳನ್ನು ಅಂಗವಿಕಲ ಅಭ್ಯರ್ಥಿಗಳಿಗೆ ಕಾಯ್ದಿರಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಶೈಕ್ಷಣಿಕ ಅಂಕ ಹಾಗೂ 2021ರ ಗೇಟ್​ ಪರೀಕ್ಷೆಯಲ್ಲಿ ಪಡೆದ ಅಂಕ ಆಧರಿಸಿ ಶಾರ್ಟ್​ಲಿಸ್ಟ್​ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುವುದು.

ಅರ್ಜಿ ಸಲ್ಲಿಸಲು ಕೊನೇ ದಿನ: 28.5.2021
ಅಧಿಸೂಚನೆಗೆ: https://bit.ly/2QVRvdK
ಮಾಹಿತಿಗೆ:https://nhai.gov.in


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries