ನವದೆಹಲಿ: ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್‌ಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸದಂತೆ ವಿವರವಾದ ಪರಿಶೀಲನೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಸೂಚಿಸಿದೆ.
ಈ ಬಗ್ಗೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಚಿವಾಲಯ ನಿರ್ದೇಶನ ನೀಡಿದೆ.
ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿರುವುದನ್ನು ಖಚಿತಪಡಿಸಿಕೊಳ್ಳಬೇಕು. ವಿಶೇಷವಾಗಿ ಬೇಸಿಗೆ ಕಾಲ ಇರುವುದರಿಂದ ದುರಂತಗಳು ಸಂಭವಿಸುವ ಸಾಧ್ಯತೆಗಳಿರುತ್ತವೆ. ಹೀಗಾಗಿ, ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲಾ ಅವರು ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.