ತಿರುವನಂತಪುರ: ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ನ್ನು ಈ ತಿಂಗಳು 30 ವರೆಗೆ ವಿಸ್ತರಿಸಲಾಗಿದೆ. ಮಲಪ್ಪುರಂ ಹೊರತುಪಡಿಸಿ ಎಲ್ಲಾ ಮೂರು ಜಿಲ್ಲೆಗಳಲ್ಲಿ ಟ್ರಿಪಲ್ ಲಾಕ್‍ಡೌನ್ ರದ್ದುಗೊಂಡಿದೆ.
ಟ್ರಿಪಲ್ ಲಾಕ್‍ಡೌನ್ ವಿಧಿಸಲಾಗಿರುವ ಎಲ್ಲಾ ಜಿಲ್ಲೆಗಳಲ್ಲಿ, ಮಲಪ್ಪುರಂ ಹೊರತುಪಡಿಸಿ, ಕೋವಿಡ್ ಪರೀಕ್ಷಾ ಸಕಾರಾತ್ಮಕತೆಯ ಪ್ರಮಾಣವು ಶೇಕಡಾ 25 ಕ್ಕೆ ಇಳಿದಿದೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆಯಿಂದ ಎರ್ನಾಕುಳಂ, ತ್ರಿಶೂರ್ ಮತ್ತು ತಿರುವನಂತಪುರ ಜಿಲ್ಲೆಗಳಲ್ಲಿ ಟ್ರಿಪಲ್ ಲಾಕ್‍ಡೌನ್ ನ್ನು ರದ್ದುಪಡಿಸಲಾಗುವುದು. ಮಲಪ್ಪುರಂನಲ್ಲಿ ಟ್ರಿಪಲ್ ಲಾಕ್ ಡೌನ್ ಮುಂದುವರಿಯಲಿದೆ. ಮಲಪ್ಪುರಂ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿರುವಂತೆ ಲಾಕ್‍ಡೌನ್ ಮುಂದುವರಿಯುತ್ತದೆ ಎಂದರು.
ಮಲಪ್ಪುರಂನಲ್ಲಿ ಟ್ರಿಪಲ್ ಸೋಕಿನ ಹರಡುವಿಕೆ ನಿಯಂತ್ರಣದಲ್ಲಿಲ್ಲ. ಈ ನಿಟ್ಟಿನಲ್ಲಿ ಮಲಪ್ಪುರಂ ಜಿಲ್ಲೆಯನ್ನು ಪ್ರತ್ಯೇಕವಾಗಿ ಪರಿಶೀಲಿಸಿ ಅಲ್ಲಿಗೆ ಸಂಬಂಧಿಸಿ ಕಠಿಣ ನಿಲುವು ತೆಗೆದುಕೊಳ್ಳಬೇಕು ಎಂದು ಸಿಎಂ ಹೇಳಿರುವರು.