ಆಗ್ರಾ: ತಾಜ್ ಮಹಲ್ ಸೇರಿದಂತೆ ಸಂರಕ್ಷಿತ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಿಸಲು ಸಾರ್ವಜನಿಕರಿಗೆ ಜೂನ್ 16ರಿಂದ ತೆರೆಯಲು ನಿರ್ಧರಿಸಲಾಗಿದೆ.
ಕೋವಿಡ್-19 ಕಾರಣಕ್ಕೆ ಈ ಸ್ಮಾರಕಗಳನ್ನು ಮುಚ್ಚಲಾಗಿತ್ತು. ಪ್ರವಾಸಿಗರು ಈ ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡುವ ಮುನ್ನ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಕಾಯ್ದಿರಿಸಬೇಕು. ಆಫ್‌ಲೈನ್ ಸೌಲಭ್ಯವಿಲ್ಲ ಎಂದು ಭಾರತೀಯ ಪುರಾತತ್ವ ಇಲಾಖೆ ತಿಳಿಸಿದೆ.