HEALTH TIPS

ಯುಎಇಯಲ್ಲಿ ಸೆ.19 ರಿಂದ 14ನೇ ಆವೃತ್ತಿಯ ಐಪಿಎಲ್ ಪುನರಾರಂಭ; ಅಕ್ಟೋಬರ್ 15ಕ್ಕೆ ಫೈನಲ್!

          ಮುಂಬೈಕೊರೋನಾ ಕಾರಣದಿಂದ ಅರ್ಧಕ್ಕೆ ನಿಲ್ಲಿಸಲಾಗಿದ್ದ ಐಪಿಎಲ್ 2021 ಆವೃತ್ತಿಯನ್ನು ಪುನರಾರಂಭಿಸಲು ಸಿದ್ದತೆ ನಡೆಯುತ್ತಿದ್ದು ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಆರಂಭವಾಗಲಿದೆ.

        ಭಾರತದಲ್ಲಿ ಕೊರೋನಾ ಪಿಡುಗು ಕಡಿಮೆಯಾಗದ ಕಾರಣ ಯುಎಇಯಲ್ಲಿ ಐಪಿಎಲ್ ನ ಉಳಿದ ಪಂದ್ಯಗಳನ್ನು ನಡೆಸಲು ಬಿಸಿಸಿಐ ನಿರ್ಧರಿಸಿದೆ. ಇದರಿಂದ ಈ ಆವೃತ್ತಿಯ ಉಳಿದ 31 ಪಂದ್ಯಗಳನ್ನು ಸೆಪ್ಟೆಂಬರ್ 19 ರಿಂದ ದುಬೈ, ಅಬುಧಾಬಿ ಹಾಗೂ ಶಾರ್ಜಾದಲ್ಲಿ ಆಯೋಜಿಸಲಾಗುವುದು ಎಂದು ಬಿಸಿಸಿಐ ಪ್ರಕಟಿಸಿದೆ.

         ಈ ವರ್ಷದ ಐಪಿಎಲ್ ಫೈನಲ್ ಅಕ್ಟೋಬರ್ 15ರಂದು ನಡೆಯಲಿದೆ ಎಂಬ ಅಂಶವೂ ಬಹಿರಂಗವಾಗಿದೆ. 25 ದಿನಗಳ ಒಳಗೆ ಟೂರ್ನಿಯನ್ನು ಮುಗಿಸಲು ಕ್ರಿಕೆಟ್ ಮಂಡಳಿ ಉತ್ಸುಕವಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

       ಇನ್ನು ಕೆಲ ವಿದೇಶಿ ಆಟಗಾರರು ಈ ಬಾರಿಯ ಐಪಿಎಲ್ ನಿಂದ ಹೊರಹೋಗಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ ನಾವು ವಿದೇಶಿ ಆಟಗಾರರನ್ನು ಸಂಪರ್ಕಿಸಿ ಮಾತುಕತೆ ನಡೆಸುತ್ತಿದ್ದೇವೆ. ಮಾತುಕತೆಗಳು ಫಲ ನೀಡಿದರೆ ವಿದೇಶಿ ಆಟಗಾರರು ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಲ್ಲದಿದ್ದರೆ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇವೆ.

         2020ರ ಐಪಿಎಲ್ ಸಹ ರದ್ದಾಗಿದ್ದು ಈ ವೇಳೆ ಟೂರ್ನಿಯನ್ನು ಬಯೋ-ಬಬಲ್ ನಲ್ಲಿ ಯುಎಇಯಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries