ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕು ಇಳಿಮುಖದ ಹಾದಿ ಎಂದಿನಂತೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 1,34,154 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. 2,887 ಮಂದಿ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,84,41,986ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 3,37,989ಕ್ಕೆ ತಲುಪಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17,13,413ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 2,11,499 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,63,90,584ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 21,59,873 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 35,37,82,648 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 22,10,43,693 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.