ನವದೆಹಲಿ: ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ದೇಶದಲ್ಲಿ 719 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಶನಿವಾರ ತಿಳಿಸಿದೆ. ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ವೈದ್ಯರ ಸಾವು ದಾಖಲಾಗಿದೆ.
ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಪ್ರಕಾರ, ಬಿಹಾರದಲ್ಲಿ 111, ದೆಹಲಿಯಲ್ಲಿ 109, ಉತ್ತರ ಪ್ರದೇಶದಲ್ಲಿ 79, ಪಶ್ಚಿಮ ಬಂಗಾಳದಲ್ಲಿ 63, ರಾಜಸ್ಥಾನದಲ್ಲಿ 43 ವೈದ್ಯರು ಮೃತಪಟ್ಟಿದ್ದಾರೆ.
ದಕ್ಷಿಣದ ರಾಜ್ಯಗಳ ಪೈಕಿ ಆಂಧ್ರ ಪ್ರದೇಶದಲ್ಲಿ 35 ವೈದ್ಯರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ 36 ಡಾಕ್ಟರ್ ಗಳು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 32, ಕರ್ನಾಟಕದಲ್ಲಿ 9, ಕೇರಳದಲ್ಲಿ 24 ವೈದ್ಯರು ಸಾವನ್ನಪ್ಪಿದ್ದಾರೆ.