ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 19ರಿಂದ ಆರಂಭವಾಗುವ ಸಾಧ್ಯತೆ ಇದ್ದು, ಆಗಸ್ಟ್ 13ಕ್ಕೆ ಅಂತ್ಯಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಸುಮಾರು ಒಂದು ತಿಂಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ 20 ದಿನಗಳ ಕಾಲ ಕಲಾಪ ನಡೆಯಲಿದೆ. ಸಾಮಾನ್ಯವಾಗಿ ಮುಂಗಾರು ಅಧಿವೇಶನ ಜುಲೈ ಮೂರನೇ ವಾರದಲ್ಲಿ ಆರಂಭವಾಗಿ, ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಕೊನೆಗೊಳ್ಳುವುದು ವಾಡಿಕೆ. ಆದರೆ, ಈ ಬಾರಿ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯ ಶಿಫಾರಸಿನ ಮೇಲೆ ಅಧಿವೇಶನದ ಅವಧಿಯನ್ನು ನಿಗದಿಪಡಿಸಲಾಗಿದೆ.
ಅಧಿವೇಶನದ ಅವಧಿಯಲ್ಲಿ ಕೋವಿಡ್ ಸಂಬಂಧಿತ ಎಲ್ಲ ಮಾರ್ಗ ಸೂಚಿಗಳನ್ನು ಪಾಲಿಸಲು ಸಂಸತ್ತಿನ ಆವರಣವನ್ನು ಸಿದ್ಧಗೊಳಿಸಲಾಗಿದೆ. ಅಧಿವೇಶನದ ಅವಧಿಯಲ್ಲಿ ಸಂಸತ್ ಭವನದ ಆವರಣ ಪ್ರವೇಶಿಸುವವರು ಕನಿಷ್ಠ ಕೋವಿಡ್ ಲಸಿಕೆಯ ಒಂದು ಡೋಸ್ ತೆಗೆದುಕೊಂಡಿರಬೇಕು.