HEALTH TIPS

ಕರ್ನಾಟಕದಲ್ಲಿ ಅನ್ ಲಾಕ್ 2: ಮೆಟ್ರೋ, ಬಸ್ ಸಂಚಾರಕ್ಕೆ ಅನುಮತಿ, ಸಂಜೆ 5 ಗಂಟೆಯವರೆಗೂ ಎಲ್ಲಾ ಅಂಗಡಿ ಓಪನ್!

          ಬೆಂಗಳೂರು: ಕೋವಿಡ್-19 ಪಾಸಿಟಿವಿಟಿ ಪ್ರಮಾಣ ಶೇಕಡಾ 5ಕ್ಕಿಂತಲೂ ಕಡಿಮೆ ಇರುವ ಉತ್ತರ ಕನ್ನಡ, ಬೆಳಗಾವಿ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ, ಬೀದರ್, ಜಿಲ್ಲೆಗಳಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.

           ಈ ಜಿಲ್ಲೆಗಳಲ್ಲಿ ಸೋಮವಾರದಿಂದ ಹೋಟೆಲ್ ಆರಂಭಿಸಲು, ಅಂಗಡಿ ಮುಂಗಟ್ಟುಗಳನ್ನು ಸಂಜೆ 5 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗಿದೆ. ಹೋಟೆಲ್ ಗಳಲ್ಲಿ ಕುಳಿತು ತಿನ್ನಲು ಅವಕಾಶವಿದೆ. ಆದರೆ, ಶೇ. 50 ರಷ್ಟು ಗ್ರಾಹಕರಿಗೆ ಮಾತ್ರ ಅನುಮತಿ ನೀಡಲಾಗಿದೆ. ಬಾರ್ ನಲ್ಲಿ ಕುಳಿತು ಊಟ ಮಾಡಲು ಅವಕಾಶವಿದೆ. ಮದ್ಯ ಪೂರೈಕೆಗೆ ಅವಕಾಶ ಇಲ್ಲ ಎಂದರು.

          ಬಸ್, ಮೆಟ್ರೋ ಸಂಚಾರಕ್ಕೆ ಶೇ.50 ಆಸನ ಸಾಮರ್ಥ್ಯದೊಂದಿಗೆ ಅವಕಾಶ: ಬೆಂಗಳೂರಿನಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಶೇಕಡಾ 50 ರಷ್ಟು ಪ್ರಯಾಣಿಕರ ಮಿತಿಯೊಂದಿಗೆ ಅವಕಾಶ ಮಾಡಿಕೊಡಲಾಗಿದೆ. ಮೆಟ್ರೋ ರೈಲು ಕೂಡಾ ಶೇಕಡಾ 50 ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ರೆಸಾರ್ಟ್ ಮತ್ತು ಲಾಡ್ಜ್ ಗಳಲ್ಲಿ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಶೇ 50 ರಷ್ಟು ಸಾಮರ್ಥ್ಯದೊಂದಿಗೆ ಹೊರಾಂಗಣ ಚಿತ್ರೀಕರಣ, ಹವಾನಿಯಂತ್ರಣವಿಲ್ಲದೆ ಜಿಮ್ ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಸಿನಿಮಾ ಮಂದಿರ, ದೇಗುಲ, ಮಾಲ್ ಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

           13 ಜಿಲ್ಲೆಗಳಲ್ಲಿ ಜೂನ್ 11ರಂದು ಹೊರಡಿಸಿರುವ ಮಾರ್ಗಸೂಚಿಗಳು ಮುಂದುವರಿಕೆ: ಶೇ.5 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವಿರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11 ರಂದು ಹೊರಡಿಸಿರುವ ಮಾರ್ಗಸೂಚಿಗಳು ಮುಂದುವರೆಯುತ್ತವೆ

            ಮೈಸೂರಿನಲ್ಲಿ ಲಾಕ್ ಡೌನ್ ಯಥಾಸ್ಥಿತಿ: ಶೇಕಡಾ10ಕ್ಕಿಂತಲೂ ಹೆಚ್ಚಿನ ಪಾಸಿಟಿವಿಟಿ ದರ ಹೆಚ್ಚಿರುವ ಮೈಸೂರಿನಲ್ಲಿ ಈಗಿರುವ ಲಾಕ್ ಡೌನ್ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಯಡಿಯೂರಪ್ಪ ಹೇಳಿದರು.

    ನೈಟ್ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಮುಂದುವರಿಕೆ: ಪ್ರತಿನಿತ್ಯ ನೈಟ್ ಕರ್ಫ್ಯೂ ಸಂಜೆ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಮುಂದುವರೆಯುತ್ತದೆ. ವಾರಾಂತ್ಯ ಕರ್ಫ್ಯೂ ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೂ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries