HEALTH TIPS

ಕೇರಳ: ಕೋವಿಡ್‌ ಬಿಕ್ಕಟ್ಟು ಎದುರಿಸಲು ₹20 ಸಾವಿರ ಕೋಟಿ ಪ್ಯಾಕೇಜ್‌ ಘೋಷಣೆ

         ತಿರುವನಂತಪುರಂ: ಕೋವಿಡ್‌ 19 ಪಿಡುಗಿನ ಎರಡನೇ ಅಲೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಎದುರಿಸಲು ಕೇರಳ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ₹20ಸಾವಿರ ಕೋಟಿ ಮೊತ್ತದ ಪ್ಯಾಕೇಜ್ ಘೋಷಿಸಿದೆ.

         ಹಣಕಾಸು ಸಚಿವ ಕೆ.ಎನ್‌.ಬಾಲಗೋಪಾಲ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎರಡನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ ಅನ್ನು ಶುಕ್ರವಾರ ಮಂಡಿಸಿದ್ದು, ಇದರಲ್ಲಿ ಕೋವಿಡ್‌ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್‌ ಅನ್ನು ಪ್ರಕಟಿಸಿದರು.

          ಈ ಹಣಕಾಸಿನ ಪ್ಯಾಕೇಜ್‌ ಜೊತೆಗೆ, 18 ವರ್ಷಕ್ಕಿಂತ ಮೇಲ್ಪಟ್ಟ ವಯೋಮಾನದ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ₹ 1 ಸಾವಿರ ಕೋಟಿ ಹಣವನ್ನು ತೆಗೆದಿರಿಸಿದ್ದಾರೆ. ಹಾಗೆಯೇ ಉಚಿತ ಲಸಿಕೆ ನೀಡಲು ಬೇಕಾದ ಉಪಕರಣಗಳು ಮತ್ತು ಸೌಲಭ್ಯಗಳಿಗಾಗಿ ಹೆಚ್ಚುವರಿಯಾಗಿ ₹500 ಕೋಟಿ ಮೀಸಲಿಟ್ಟಿರುವುದಾಗಿ ಅವರು ತಿಳಿಸಿದರು.

     'ಕೋವಿಡ್‌ ಪರಿಹಾರ ಕಾರ್ಯಗಳಿಗೆ ಹಿಂದಿನ ಸರ್ಕಾರ ತೆಗೆದಿಟ್ಟಿದ್ದ ₹20 ಸಾವಿರ ಕೋಟಿ ಹಣವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಲಾಗಿದೆ ಎಂದು ತಿಳಿಸಿದ ಹಣಕಾಸು ಸಚಿವರು, 'ಕೋವಿಡ್ 19 ಎರಡನೇ ಅಲೆಯ ಬಿಕ್ಕಟ್ಟನ್ನು ಎದುರಿಸಲು ₹20 ಸಾವಿರ ಕೋಟಿ ಹಣವನ್ನು ಮೀಸಲಿಡಲಾಗಿದೆ' ಎಂದರು.

          ನೂತನ ಬಜೆಟ್‌ಲ್ಲಿ ಆರೋಗ್ಯ ಮತ್ತು ಆಹಾರ ಭದ್ರತೆಗೆ ಒತ್ತು ನೀಡಲಾಗಿದೆ ಎಂದು ಹೇಳಿದ ಸಚಿವರು, ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಕಡಿಮೆ ಮಾಡುವುದು ಮತ್ತು ಮೂರನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದೆ ಎಂದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries