ನವದೆಹಲಿ: ಭಾರತದಲ್ಲಿ ಕೋವಿಡ್-19 ಲಸಿಕೆಯನ್ನು ಪಡೆದವರ ಸಂಖ್ಯೆ 25.87 ಕೋಟಿಯನ್ನು ದಾಟಿದೆ.
ಜೂ.14 ರಂದು ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರವಾಗಿ, ಸೋಮವಾರ ಒಂದೇ ದಿನ 18-44 ವಯಸ್ಸಿನ 20,99,621 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ದೊರೆತಿದ್ದರೆ 1,16,326 ಮಂದಿಗೆ ಎರಡನೇ ಡೋಸ್ ಲಸಿಕೆ ದೊರೆತಿದೆ.
ಲಸಿಕೆ ಅಭಿಯಾನದ ಮೂರನೇ ಹಂತಕ್ಕೆ ಚಾಲನೆ ದೊರೆತ ಬಳಿಕ 18-44 ರ ವಯಸ್ಸಿನ 4,34,35,032 ಮಂದಿಗೆ ಮೊದಲ ಡೋಸ್ ಲಸಿಕೆ ಹಾಕಲಾಗಿದ್ದರೆ 8,33,808 ಮಂದಿಗೆ ಎರಡನೇ ಡೋಸ್ ಲಸಿಕೆ ದೊರೆತಿದೆ.
ಬಿಹಾರ, ದೆಹಲಿ, ಗುಜರಾತ್, ಹರ್ಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಒಡಿಶಾ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳಗಳಲ್ಲಿ 18-44 ವಯಸ್ಸಿನ 10 ಲಕ್ಷಕ್ಕೂ ಹೆಚ್ಚು ಮಂದಿಗೆ ಲಸಿಕೆ ಹಾಕಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
1,00,67,641 ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿದ್ದು, 69,81,884 ಮಂದಿ ಆರೋಗ್ಯ ಕಾರ್ಯಕರ್ತರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. 1,68,38,400 ಮಂದಿ ಕೋವಿಡ್-19 ಮುನ್ನೆಲೆ ಕಾರ್ಯಕರ್ತರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದರೆ, 88,76,931 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ಇದರ ಹೊರತಾಗಿ 45-60 ವಯಸ್ಸಿನ 7,65,48,740 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದರೆ, 1,20,81,922 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷಗಳ ಮೇಲ್ಪಟ್ಟ 6,29,78,733 ಹಾಗೂ 2,00,70,230 ಮಂದಿ ಅನುಕ್ರಮವಾಗಿ ಮೊದಲ ಹಾಗೂ ಎರಡನೇ ಡೋಸ್ ಗಳ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.
ಜೂ.14 ರಂದು ಲಸಿಕೆ ಅಭಿಯಾನ ಪ್ರಾರಂಭವಾಗಿ 150 ದಿನಗಳು ಕಳೆದಿದ್ದು ಆ ದಿನದಂದು ಒಟ್ಟಾರೆ 35,96,462 ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 31,84,503 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ಹಾಕಿಸಲಾಗಿದ್ದರೆ, 4,11,959 ಮಂದಿಗೆ ಎರಡನೇ ಡೋಸ್ ಲಸಿಕೆ ಹಾಕಿಸಲಾಗಿದೆ.