ನವದೆಹಲಿ: ತೈಲ ಕಂಪನಿಗಳು ಮತ್ತೆ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 29 ಪೈಸೆ ಮತ್ತು ಡೀಸೆಲ್ ದರ 29 ಪೈಸೆ ಏರಿಕೆ ಮಾಡಿವೆ.
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶುಕ್ರವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 29 ಪೈಸೆ ಮತ್ತು ಡೀಸೆಲ್ ದರ 29 ಪೈಸೆ ಏರಿಕೆಯಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.11ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.03ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 95.91ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 86.81ರೂ ಗೆ ಏರಿಕೆಯಾಗಿದೆ.
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 102.1ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 94.2ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 95.86ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 89.65ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 97.24ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 91.47 ರೂ ಗೆ ಏರಿಕೆಯಾಗಿದೆ.