ನವದೆಹಲಿ: ಕೋವಿಡ್‌ನಿಂದಾಗಿ ಸಾವನ್ನಪ್ಪಿದವರ ಕುಟುಂಬಗಳಿಗೆ ಎಕ್ಸ್‌ಗ್ರೇಷಿಯಾ ನೀಡುವಂತೆ ಹಣಕಾಸು ಆಯೋಗ ಶಿಫಾರಸು ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಕೆಲವು ರಾಜ್ಯಗಳು ಎಕ್ಸ್‌ಗ್ರೇಷಿಯಾ ನೀಡುತ್ತಿವೆ. ಆದರೆ, ಈ ಎಕ್ಸ್‌ಗ್ರೇಷಿಯಾವನ್ನು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಪಾವತಿಸುತ್ತಿಲ್ಲ ಎಂದೂ ಕೇಂದ್ರ ಸರ್ಕಾರ ತಿಳಿಸಿದೆ.
ಕೋವಿಡ್-19 ಅನ್ನು ವಿಪತ್ತು ಎಂಬುದಾಗಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ಕೋವಿಡ್-19ನಿಂದಾಗಿ ಮೃತಪಟ್ಟವರ ಕುಟುಂಬಗಳಿಗೆ ₹ 4 ಲಕ್ಷ ಎಕ್ಸ್‌ಗ್ರೇಷಿಯಾ ನೀಡಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಕೆಲವರು ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತನ್ನ ಸ್ಪಷ್ಟನೆ ಸಲ್ಲಿಸಿದೆ.