ಕಾಸರಗೋಡು: ಕಾಸರಗೋಡು ಸಿವಿಲ್ ಸ್ಟೇಷನ್ ಆವರಣದಲ್ಲಿ ಪರಿಸರ ದಿನಾಚರಣೆ ಶನಿವಾರ ನಡೆಯಿತು. ಮರವಾಗಿ ಬೆಳೆಯಬಲ್ಲ ಸಸಿ ನೆಟ್ಟು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಮತ್ತು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಷಾನವಾಝ್ ಪಾದೂರು ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ನ್ಯಾಯವಾದಿ ಎಸ್.ಎನ್.ಸರಿತಾ, ಶುಚಿತ್ವ ಮಿಷನ್ ಜಿಲ್ಲಾ ಸಂಚಾಲಕ ಲಕ್ಷ್ಮಿ ಎ. ಮೊದಲಾದವರು ಉಪಸ್ಥಿತರಿದ್ದರು.