HEALTH TIPS

ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ: ವಿದೇಶಾಂಗ ಸಚಿವಾಲಯ

             ನವದೆಹಲಿ: ಜಮ್ಮು ಮತ್ತು ಕಾಶ್ಮೀರ ದೇಶದ ಅವಿಭಾಜ್ಯ ಅಂಗವಾಗಿದ್ದು, ಪಾಕಿಸ್ತಾನ ಎಷ್ಟೇ ಪ್ರಶ್ನೆ ಎತ್ತಿದರೂ ವಾಸ್ತವ ಸ್ಥಿತಿಯನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಭಾರತೀಯ ವಿದೇಶಾಂಗ ಸಚಿವಾಲಯ (ಎಂಇಎ) ಗುರುವಾರ ಸ್ಪಷ್ಟಪಡಿಸಿದೆ.


              ಈ ಪ್ರದೇಶದ ಜನಸಂಖ್ಯಾ ರಚನೆಯನ್ನೇ ಬದಲಾಯಿಸಲು ಭಾರತ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಪಾಕಿಸ್ತಾನ ವಿದೇಶಾಂಗ ಸಚಿವರು ವಿಶ್ವಸಂಸ್ಥೆಯ ಇಬ್ಬರು ಉನ್ನತ ಅಧಿಕಾರಿಗಳಿಗೆ ಪತ್ರ ಬರೆದಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಎಂಇಎ ವಕ್ತಾರ ಅರಿಂದಮ್ ಬಾಗ್ಚಿ, ಗಡಿಯಾಚೆಗಿನ ಭಯೋತ್ಪಾದನೆಯನ್ನು ಒಪ್ಪಲಾಗದು ಎಂದು ತಿರುಗೇಟು ನೀಡಿದ್ದಾರೆ.

          ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಎಷ್ಟೇ ಪ್ರಶ್ನೆ ಎತ್ತಿದರೂ ವಾಸ್ತವ ಸ್ಥಿತಿಯನ್ನು ಬದಲಿಸಲು ಸಾಧ್ಯವಿಲ್ಲ. ಜೊತೆಗೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ಒಪ್ಪಲಾಗದು. ಈ ಕುರಿತು ಯಾವುದೇ ಸಮರ್ಥನೆಯು ಸ್ವೀಕಾರಾರ್ಹವಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

         ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷರಿಗೆ ಮತ್ತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ , ನಕಲಿ ವಾಸಪತ್ರ ಮತ್ತು ಇತರ ದಾಖಲೆಗಳನ್ನು ವಿತರಿಸುವ ಮೂಲಕ ಭಾರತವು ಕಾಶ್ಮೀರದ ಜನಸಂಖ್ಯಾ ರಚನೆಯನ್ನೇ ಬದಲಿಸಲು ಹೊರಟಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಭಾರತದ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries