ಕಾಸರಗೋಡು: ಪೆರುಂಬಟ್ಟ ಸೇತುವೆ ಜೂ.23ರಂದು ಉದ್ಘಾಟನೆಗೊಳ್ಳಲಿದೆ. ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರಂಭದಲ್ಲಿ ಲೋಕೋಪಯೋಗಿ ಸಚಿವ ಪಿ.ಎ.ಮುಹಮ್ಮದ್ ರಿಯಾಸ್ ಚಾಲನೆ ನೀಡುವರು. ಕಯ್ಯೂರು-ಚೀಮೇನಿ -ವೆಸ್ಟ್ ಏಳೇರಿ ಗ್ರಾಮ ಪಂಚಾಯತ್ ಗಳನ್ನು ಪರಸ್ಪರ ಸಂಪರ್ಕಿಸುವ ಸೇತುವೆ ಇದಾಗಿದೆ. ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ ಅಳವಡಿಸಿ 9.90 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿದೆ. 11.05 ಮೀಟರ್ ಅಗಲ, 25.32 ಮೀಟರ್ ಉದ್ದ, 4 ಸ್ಪಾನ್ ಗಳು ಇರುವ ಸೇತುವೆ ತೇಜಸ್ವಿನಿ ನದಿಗೆ ಅಡ್ಡವಾಗಿ ನಿರ್ಮಿಸಲಾಗಿದೆ.