HEALTH TIPS

ನಟ ಸಂಚಾರಿ ವಿಜಯ್ ನಿಧನ: ಕನ್ನಡದಲ್ಲೇ ಟ್ವೀಟ್ ಮಾಡಿ ಕಂಬನಿ ಮಿಡಿದ ಅಮೆರಿಕ ರಾಯಭಾರ ಕಚೇರಿ, ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ

        ಬೆಂಗಳೂರುಬೈಕ್ ಅಪಘಾತದಲ್ಲಿ ಮೃತಪಟ್ಟ ಖ್ಯಾತ ನಟ ಸಂಚಾರಿ ವಿಜಯ್ ಅವರ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಕಂಬನಿ ಮಿಡಿದಿದೆ.


          ಕನ್ನಡದ ಉದಯೋನ್ಮುಖ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರ ಅಕಾಲಿಕ ನಿಧನಕ್ಕೆ ರಾಜಕೀಯ ನಾಯಕರು ಸೇರಿದಂತೆ ಇಡೀ ಚಿತ್ರರಂಗವೇ ಕಂಬನಿ ಮಿಡಿದಿದೆ. ಜೊತೆಗೆ ಅಮೆರಿಕದ ರಾಯಭಾರ ಕಚೇರಿಯಿಂದಲೂ ಸಂತಾಪ ಸೂಚಿಸಲಾಗಿದೆ. ಅದೂ ಕೂಡ ಕನ್ನಡಲ್ಲಿಯೇ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿರುವುದು ವಿಶೇಷವಾಗಿದೆ.

ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಅಧಿಕೃತ ಟ್ವಿಟರ್ ಖಾತೆ, ಯುಎಸ್ ಅಂಡ್ ಚೆನ್ನೈ ಖಾತೆಯಲ್ಲಿ ಈ ಟ್ವೀಟ್ ಮಾಡಲಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi+ (ಲೈಂಗಿಕ ಅಲ್ಪಸಂಖ್ಯಾತರು) ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ 'ನಾನು ಅವನಲ್ಲ…ಅವಳು' ಪ್ರದರ್ಶನ ಸಂವಾದದಲ್ಲಿ ಸಂಚಾರಿ ವಿಜಯ್‌ ಭಾಗಿಯಾಗಿದ್ದರು ಎಂದು ಟ್ವೀಟ್ ಮಾಡಿದೆ.

           ಈ ಟ್ವೀಟ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ನೂರಾರು ಮಂದಿ ರಿಟ್ವೀಟ್ ಮಾಡಿದ್ದಾರೆ. ಕೆಲವರು ನಮ್ಮ ದೇಶದವರೇ.. ಹೀಗೆ ಸಾಮಾನ್ಯ ಜನರಿಗೆ ಅರ್ಥ ಆಗುವ ರೀತಿಯಲ್ಲಿ ಹಾಕಲ್ಲ. ಆದರೆ ನೀವು ಕನ್ನಡದ ನಟನಿಗೆ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿರುವುದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries