ಸಮರಸ ಚಿತ್ರ ಸುದ್ದಿ: ಮಧೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ವಠಾರದಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮವನ್ನು ವಿದ್ಯಾನಗರ ಪೊಲೀಸ್ ಠಾಣೆ ಎ.ಎಸ್.ಐ ಸುಧೀರ್ ಉದ್ಘಾಟಿಸಿದರು. ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ಎಂ. ಬಾಬು, ದೇವಸ್ಥಾನ ಸಿಬ್ಬಂದಿ, ಭಕ್ತಾದಿಗಳು ಪಾಲ್ಗೊಂಡಿದ್ದರು.