ನವದೆಹಲಿ: ದೇಶದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 31 ರಿಂದ 35 ಪೈಸೆ ಮತ್ತು ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ.
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶನಿವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಮೂಲಗಳ ಪ್ರಕಾರ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 31 ರಿಂದ 35 ಪೈಸೆ ಮತ್ತು ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ.
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 104.28ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 96.22 ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 98.03 ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 91.55 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.24 ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 93.28 ರೂ ಗೆ ಏರಿಕೆಯಾಗಿದೆ.
ತಿರುವನಂತಪುರಂನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 100. 15 ಪೈಸೆ ಮತ್ತು ಡೀಸೆಲ್ ರೂ 95.99 ಪೈಸೆ ಏರಿಕೆಯಾಗಿದೆ.
. ಕೊಚ್ಚಿಯಲ್ಲಿ ಪ್ರಸ್ತುತ ಪೆಟ್ರೋಲ್ ಬೆಲೆ 98.21 ರೂ. ಮತ್ತು ಡೀಸೆಲ್ 95.16 ರೂ. ಕೋಝಿಕೋಡ್ನ ಬೆಲೆ ಲೀಟರ್ಗೆ 98.58 ರೂ. ಮತ್ತು ಡೀಸೆಲ್ ಲೀಟರ್ಗೆ 93.80 ರೂ.ಆಗಿದೆ.