ತಿರುವನಂತಪುರ: ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆÀ ವಿದ್ಯಾರ್ಥಿವೇತನ ನೀಡುವ ಕುರಿತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸರ್ವಪಕ್ಷ ಸಭೆ ಕರೆದಿರುವರು. ಹೈಕೋರ್ಟ್ ತೀರ್ಪಿನ ಬಳಿಕ ಪರಿಸ್ಥಿತಿ ಕುರಿತು ಚರ್ಚಿಸಲು ನಾಲ್ಕನೇ ದಿನವಾದ ಶುಕ್ರವಾರ ಮಧ್ಯಾಹ್ನ 3.30 ಕ್ಕೆ ಸರ್ವಪಕ್ಷ ಸಭೆ ಕರೆದಿದ್ದು, ಸಭೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ.
ಈ ಹಿಂದೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅಲ್ಪಸಂಖ್ಯಾತರ ಕಲ್ಯಾಣ ಅನುಪಾತಕ್ಕೆ ಸಂಬಂಧಿಸಿದ ಹೈಕೋರ್ಟ್ ತೀರ್ಪನ್ನು ಪಾಲಿಸುವುದಾಗಿ ಹೇಳಿದ್ದರು. ಎಲ್ಲರೊಂದಿಗೆ ಚರ್ಚಿಸಿದ ನಂತರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಸಿಎಂ ಹೇಳಿದ್ದಾರೆ. ಈ ವಿಷಯದಲ್ಲಿ ಹೈಕೋರ್ಟ್ ತೀರ್ಪು ಎರಡೂ ಪಕ್ಷಗಳಿಗೆ ದೊಡ್ಡ ತಲೆನೋವಾಗಿತ್ತು. ಈ ಸನ್ನಿವೇಶದಿಂದ ಸರ್ವಪಕ್ಷ ಸಭೆ ಕರೆಯಲು ಸರ್ಕಾರ ನಿರ್ಧರಿಸಿದೆ.