ತಿರುವನಂತಪುರ: ಜನಸಂದಣಿಯನ್ನು ತಡೆಗಟ್ಟಲು ಮತ್ತು ಮಾನದಂಡಗಳಂತೆ ಕಾರ್ಯನಿರ್ವಹಿಸಲು ಅವಕಾಶವಿರುವ ಅಂಗಡಿ-ಮುಗ್ಗಟ್ಟುಗಳ ಎದುರು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಪೋಲೀಸ್ ಮುಖ್ಯಸ್ಥ ಲೋಕನಾಥ ಬೆಹ್ರಾ ಎಲ್ಲಾ ಜಿಲ್ಲಾ ಪೋಲೀಸ್ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದಾರೆ. ಸೂಚನೆಗಳನ್ನು ಪಾಲಿಸದ ಅಂಗಡಿಯವರು, ವ್ಯವಸ್ಥಾಪಕರು ಮತ್ತು ಗ್ರಾಹಕರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಅಗತ್ಯ ಸೇವೆಗಳ ವಿಭಾಗದಲ್ಲಿರುವವರಿಗೆ ಪ್ರಯಾಣ ಮಾಡುವಾಗ ಗುರುತಿನ ಚೀಟಿ ಕಡ್ಡಾಯವಾಗಿದೆ. ಇತರರು ಅಫಿಡವಿಟ್ ನ್ನು ತೋರಿಸಬೇಕು. ಹೊಸ ಉದ್ಯೋಗ, ಪರೀಕ್ಷೆಗಳು, ವೈದ್ಯಕೀಯ ಚಿಕಿತ್ಸೆ ಮತ್ತು ಅಂತ್ಯಕ್ರಿಯೆಗಳಲ್ಲಿ ಪಾಲ್ಗೊಳ್ಳಲು ಮಾತ್ರ ಜಿಲ್ಲೆಯ ಹೊರಗಿನ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ. ಇದಕ್ಕಾಗಿ ಅಫಿಡವಿಟ್ ಕಡ್ಡಾಯವಾಗಿದೆ. ಜಿಲ್ಲೆಯ ಹೊರಗಿನ ಪ್ರಯಾಣವನ್ನು ಸಾಧ್ಯವಾದಷ್ಟು ನಿಯಂತ್ರಿಸಲು ಸೂಚಿಸಲಾಗಿದೆ.
ಸ್ಥಳೀಯ ಮಟ್ಟದಲ್ಲಿ ಅಗತ್ಯತೆಗಳನ್ನು ಗಣನೆಗೆ ತೆಗೆದುಕೊಂಡು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅನುಮತಿಯೊಂದಿಗೆ ಜಿಲ್ಲಾ ಪೋಲೀಸ್ ಮುಖ್ಯಸ್ಥರು ಅಗತ್ಯ ನಿರ್ಬಂಧಗಳನ್ನು ವಿಧಿಸಬಹುದು ಎಂದು ರಾಜ್ಯ ಪೋಲೀಸ್ ಮುಖ್ಯಸ್ಥರು ನಿರ್ದೇಶನ ನೀಡಿರುವರು.