ತಿರುವನಂತಪುರ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮತ್ತು ಶಿಕ್ಷಕರಲ್ಲದವರು ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಸುವ ಮೂಲಕ ಮಾದರಿಗಳಾಗಬೇಕು ಎಂದು ರಾಜ್ಯ ಶಿಕ್ಷಣ ಸಚಿವ ಶಿವಂಕುಟ್ಟಿ ಕರೆನೀಡಿದ್ದಾರೆ. ತಿರುವನಂತಪುರಂನ ಪಟ್ಟಂನ ಮಾಡೆಲ್ ಗಲ್ರ್ಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸರ್ಕಾರದ ವಿಜ್ಞಾನ ಪ್ರಯೋಗಾಲಯ ಮತ್ತು ಶಾಲಾ ವೆಬ್‍ಸೈಟ್ ನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕೇರಳದ ಮಕ್ಕಳು ರಾಷ್ಟ್ರಮಟ್ಟದಲ್ಲಿ ಉನ್ನತ ಮಟ್ಟದ ಯಶಸ್ಸನ್ನು ಸಾಧಿಸಲು ಅನುವು ಮಾಡಿಕೊಡುವುದು ಶಿಕ್ಷಣ ಇಲಾಖೆಯ ಉದ್ದೇಶವಾಗಿದೆ. ಆನ್‍ಲೈನ್ ತರಗತಿಗಳನ್ನು ಮಕ್ಕಳಿಗೆ ಇಷ್ಟವಾಗುವ ರೀತಿಯಲ್ಲಿ ವ್ಯವಸ್ಥೆಗೊಳಿಸಬೇಕು. ಮಕ್ಕಳಿಗೆ ಕಲಿಕಾ ಸಾಮಗ್ರಿಗಳು ಲಭ್ಯವಾಗುವಂತೆ ಮಾಡಲು ಸಾಮಾಜಿಕ-ಸಾಂಸ್ಕøತಿಕ ಸಂಸ್ಥೆಗಳು ಮತ್ತು ಎನ್‍ಜಿಒಗಳು ಕೈಜೋಡಿಸಬೇಕು ಎಂದು ಸಚಿವರು ಒತ್ತಾಯಿಸಿದರು.