ಬದಿಯಡ್ಕ: ಕುಂಟಿಕಾನ ಹಿರಿಯ ಬುನಾದಿ ಶಾಲಾ ಪ್ರವೇಶೋತ್ಸವ ಸಮಾರಂಭವನ್ನು ವಾಟ್ಸಾಪ್ ಮೂಲಕ ನಡೆಸುವುದರೊಂದಿಗೆ ಸಾಮಾಜಿಕ ಜಾಲತಾಣ ಶಿಕ್ಷಣಕ್ಕೆ ಬೆಲ್ ಬಾರಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಜಸ್ಟಿನ್ ಜೋಸ್ ಅಧ್ಯಕ್ಷತೆ ವಹಿಸಿದ್ದರು. ಬದಿಯಡ್ಕ
ಗ್ರಾಮಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಎಂ. ಉದ್ಘಾಟಿಸಿದರು. ಸಾರ್ವಜನಿಕ ವಿದ್ಯಾಭ್ಯಾಸ ಸಂರಕ್ಷಣಾ ಯಜ್ಞದ ಜಿಲ್ಲಾ ಸಂಚಾಲಕ ದಿಲೀಪ್ ಕುಮಾರ್ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕುಂಬಳೆ ಉಪಜಿಲ್ಲಾ ವಿದ್ಯಾ|ಧಿಕಾರಿ ಯತೀಶ್ ಕುಮಾರ್ ರೈ, ಬ್ಲಾಕ್ ಪಂಚಾಯಿತಿ ಸದಸ್ಯೆ ಜಯಂತಿ, ಗ್ರಾಮಪಂಚಾಯಿತಿ ಸದಸ್ಯೆ ಜಯಶ್ರೀ, ಶಾಲಾ ವ್ಯವಸ್ಥಾಪಕ ಶಂಕರನಾರಾಯಣ ಶರ್ಮ ಕುಂಟಿಕಾನ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಜೋನಿ ಡಿಸೋಜ, ಮಾತೃ ಸಂಘದ ಅಧ್ಯಕ್ಷೆ ಪ್ರೇಮಲತಾ, ಶಾಲಾ ನೌಕರ ಸಂಘದ ಕಾರ್ಯದರ್ಶಿ ಗಣೇಶ್ ಭಟ್, ಹಿರಿಯ ಅಧ್ಯಾಪಕ ಉಣ್ಣಿಕೃಷ್ಣನ್ ಟಿ.ಒ. ಶುಭಾಶಂಸನೆಗೈದರು. ಶಾಲಾ ಮುಖ್ಯೋಪಾಧ್ಯಾಯ ವೆಂಕಟ್ರಾಜ ವಾಶೆಮನೆ ಸ್ವಾಗತಿಸಿ, ಎಸ್.ಆರ್.ಜಿ. ಸಂಚಾಲಕ ಕೃಷ್ಣನ್ ನಂಬೂದಿರಿ ವಂದಿಸಿದರು. ವಿವಿಧ ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳ ಪ್ರದರ್ಶನದ ಚಿತ್ರಣವನ್ನು ನೀಡಿದರು. ಅಧ್ಯಾಪಕ ವೃಂದದ ಸಹಕಾರದೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.