HEALTH TIPS

ಸಮಸ್ಯೆ ಪರಿಹಾರ ಕಲಿಕಾ ಪದ್ಧತಿ: ಭಾರತದೊಂದಿಗೆ ಕೈಜೋಡಿಸಲು ಯುನೆಸ್ಕೊ ಸಿದ್ಧ

          ಬೆಂಗಳೂರು: 'ಯಾವುದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ತಾಂತ್ರಿಕ ಮತ್ತು ಆವಿಷ್ಕಾರ ಆಧಾರಿತ‌ ಶಿಕ್ಷಣ ಪದ್ಧತಿ ಜಾರಿಗೆ ಭಾರತದೊಂದಿಗೆ ಕೈ ಜೋಡಿಸಲು ಯುನೆಸ್ಕೊ ಉತ್ಸುಕವಾಗಿದೆ' ಎಂದು ಯುನೆಸ್ಕೊದ 'ಸಮಸ್ಯೆಗೆ ಪರಿಹಾರ ಕಲ್ಪಿಸುವ ಕಲಿಕಾ ಶಿಕ್ಷಣ ವಿಭಾಗ'ದ ಮುಖ್ಯಸ್ಥೆ ಪ್ರೊ.ಅನೆಟ್‌ ಕೊಲ್ಮಾಸ್‌ ಹೇಳಿದರು.

         ʼಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕಲಿಕಾ ಪದ್ಧತಿʼ ಕುರಿತು ಶುಕ್ರವಾರ ಆನ್ ಲೈನ್ ನಲ್ಲಿ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

         'ನಾವು ಪಡೆಯುವ ಅಥವಾ ಬೋಧಿಸುವ ಶಿಕ್ಷಣ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶ ಹೊಂದಿರಬೇಕಾದುದು ಇಂದಿನ ತುರ್ತು ಅಗತ್ಯ. ಈ ನಿಟ್ಟಿನಲ್ಲಿ ತಾಂತ್ರಿಕ ಮತ್ತು ಆವಿಷ್ಕಾರ ಶಿಕ್ಷಣಕ್ಕೆ ಯುನೆಸ್ಕೋ ಹೆಚ್ಚು ಒತ್ತು ನೀಡುತ್ತಿದೆ' ಎಂದರು.‌\

        'ರಾಷ್ಟ್ರೀಯ ಶಿಕ್ಷಣ ನೀತಿ (ಎನ್ ಇ ಪಿ) ಕರ್ನಾಟಕದಲ್ಲಿ ಅತ್ಯಂತ ವೇಗವಾಗಿ ಜಾರಿಯಾಗುತ್ತಿದೆ. ಕೇಂದ್ರ ಸರ್ಕಾರ ಈ ನೀತಿಯ ನ್ನು ಪ್ರಕಟಿಸಿದ ಮೊದಲ ದಿನದಿಂದಲೇ ರಾಜ್ಯಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ' ಎಂದು ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷ ಡಾ.ಕಸ್ತೂರಿ ರಂಗನ್‌ ಶ್ಲಾಘಿಸಿದರು.

         '21ನೇ ಶತಮಾನದಲ್ಲಿ ಕರ್ನಾಟಕ ಸೇರಿ ಇಡೀ ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಬಹುದೊಡ್ಡ ಕ್ರಾಂತಿಕಾರಕ ಬದಲಾವಣೆಗಳಾಗುತ್ತವೆ. ಆ ನಿಟ್ಟಿನಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ' ಎಂದರು.

'ಎನ್‌ಇಪಿಯನ್ನು ಈ ವರ್ಷದಿಂದಲೇ ಜಾರಿ ಮಾಡಲು ಸರ್ಕಾರವು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ' ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

         'ರಾಜ್ಯವು ಉದ್ಯಮಶೀಲತೆ, ಆವಿಷ್ಕಾರ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವುದರಿಂದ ಶಿಕ್ಷಣ ನೀತಿಯೂ ರಾಜ್ಯದ ಶೈಕ್ಷಣಿಕ ವ್ಯವಸ್ಥೆಗೆ ಹೊಸ ಹುರುಪು ನೀಡಲಿದೆ. ಸಮಸ್ಯೆಗೆ ಪರಿಹಾರ ಕಲ್ಪಿಸುವ ಶಿಕ್ಷಣ ನೀಡುವ ಮೂಲಕ ಸಮಾಜ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಶೀಘ್ರದಲ್ಲೇ ಸಾಕಾರವಾಗಲಿದೆ' ಎಂದರು.

         ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಷಿ ಸೇರಿದಂತೆ ದೇಶ- ವಿದೇಶಗಳ ತಜ್ಞರು ಭಾಗವಹಿಸಿದ್ದರು.

           ರಾಜ್ಯ ಉನ್ನತ ಶಿಕ್ಷಣ ಪರಿಷತ್ ಮತ್ತು ಡೆನ್ಮಾರ್ಕ್ನ ಅಲ್ಬೋರ್ಗ್ ವಿಶ್ವವಿದ್ಯಾಲಯದ ಯುನೆಸ್ಕೊ ಸೆಂಟರ್ ಫಾರ್ ಪ್ರಾಬ್ಲಮ್ ಬೇಸ್ಡ್ ಲರ್ನಿಂಗ್ ಇನ್ ಎಂಜಿನಿಯರಿಂಗ್ ಸೈನ್ಸ್ ಮತ್ತು ಸಸ್ಟೈನಬಿಲಿಟಿ ಸಹಯೋಗದಲ್ಲಿ ಈ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries