HEALTH TIPS

ಸಿಬಿಎಸ್ ಇ ನ 10, 12ನೇ ತರಗತಿಯ ಪಠ್ಯಕ್ರಮ ಎರಡು ಅವಧಿಗೆ ವಿಂಗಡಣೆ, ಪ್ರತಿ ಅವಧಿ ಅಂತ್ಯದಲ್ಲಿ ಪರೀಕ್ಷೆ

         ನವದೆಹಲಿಕೋವಿಡ್‍ ಸಾಂಕ್ರಾಮಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ 2021-22ನೇ ಶೈಕ್ಷಣಿಕ ವರ್ಷದಲ್ಲಿ 10 ಮತ್ತು 12ನೇ ತರಗತಿಯ ಪಠ್ಯಕ್ರಮವನ್ನು ಬದಲಾಯಿಸಿ ಎರಡು ಅವಧಿಗಳಿಗೆ ವಿಂಗಡಿಸಲಾಗಿದ್ದು, ಪ್ರತಿ ಅವಧಿಯ ಕೊನೆಯಲ್ಲಿ ಪರೀಕ್ಷೆಗಳನ್ನು ನಡೆಸಲು ಕೇಂದ್ರೀಯ ಪೌಢ ಶಿಕ್ಷ ಮಂಡಳಿ(ಸಿಬಿಎಸ್‍ಇ) ನಿರ್ಧರಿಸಿದೆ.


      ಈ ಕುರಿತಂತೆ ಸಿಬಿಎಸ್ ಇ ಸೋಮವಾರ ಪ್ರಕಟಣೆ ಹೊರಡಿಸಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದ ಪಠ್ಯಕ್ರಮವನ್ನು ಎರಡು ಅವಧಿಗಳಿಗೆ ವಿಂಗಡಿಸಲಾಗಿದೆ. ವಿಂಗಡಿಸಲಾದ ಪಠ್ಯಕ್ರಮದ ಆಧಾರದಡಿ ಪ್ರತಿ ಅವಧಿಯ ಕೊನೆಯಲ್ಲಿ ಪರೀಕ್ಷೆಯನ್ನು ಮಂಡಳಿ ನಡೆಸಲಿದೆ ಎಂದು ಹೇಳಿದೆ.

          ಶೈಕ್ಷಣಿಕ ವರ್ಷದ ಕೊನೆಯಲ್ಲಿ ಮಂಡಳಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಸಂಭವನೀಯತೆ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹಿಂದಿನ ಶೈಕ್ಷಣಿಕ ವರ್ಷದಂತೆ ಪಠ್ಯಕ್ರಮದಲ್ಲಿ ಮಾರ್ಪಾಡು ಮಾಡಲಾಗಿದ್ದು, ಈ ತಿಂಗಳ ಅಂತ್ಯದ ವೇಳೆಗೆ ಹೊಸ ಪಠ್ಯಕ್ರಮದ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಮಂಡಳಿ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries