ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 34 ಸಾವಿರದ 703 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿಯ 6 ಲಕ್ಷದ 19 ಸಾವಿರದ 932 ಆಗಿದೆ. ಕಳೆದ 111 ದಿನಗಳಲ್ಲಿ ಇದು ಅತ್ಯಂತ ಕಡಿಮೆ ಸೋಂಕಿನ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 553 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಇದರೊಂದಿಗೆ ಮೃತರ ಸಂಖ್ಯೆ 4 ಲಕ್ಷದ 03 ಸಾವಿರದ 281ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಸಕ್ರಿಯ ಸೋಂಕಿತರ ಸಂಖ್ಯೆ 4 ಲಕ್ಷದ 64 ಸಾವಿರದ 357 ಇದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 51 ಸಾವಿರದ 864 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2 ಕೋಟಿಯ 97 ಲಕ್ಷದ 52 ಸಾವಿರದ 294ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 16 ಲಕ್ಷದ 47 ಸಾವಿರದ 424 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 42 ಕೋಟಿಯ 14 ಲಕ್ಷದ 24 ಸಾವಿರದ 881 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 37.07 ಕೋಟಿ ಮಂದಿಗೆ ಕೊರೋನಾ ಲಸಿಕೆ ಡೋಸ್ ಗಳನ್ನು ನೀಡಲಾಗಿದ್ದು 23 ಲಕ್ಷದ 80 ಸಾವಿರ ಡೋಸ್ ಗಳು ನೀಡಿಕೆಯ ಹಂತದಲ್ಲಿದೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿ 1.66 ಕೋಟಿಗೂ ಅಧಿಕ ಉಳಿಕೆ ಮತ್ತು ಬಳಸಿರುವ ವ್ಯಾಕ್ಸಿನ್ ಲಸಿಕೆ ಡೋಸ್ ಗಳು ಲಭ್ಯವಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.