ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆಯ ನಂತರ ಮೊನ್ನೆಗಿಂತ ನಿನ್ನೆ ಕೊಂಚ ಇಳಿಕೆಯಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಹೊತ್ತಿಗೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 41,383 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 507 ಜನ ಬಲಿಯಾಗಿದ್ದಾರೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿಯ 12 ಲಕ್ಷದ 57 ಸಾವಿರದ 720ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4 ಲಕ್ಷದ 18 ಸಾವಿರದ 987ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ ಇಂದು 4 ಲಕ್ಷದ 09 ಸಾವಿರದ 394ರಷ್ಟಾಗಿದೆ. ಕಳೆದ 24 ಗಂಟೆಗಳಲ್ಲಿ 38 ಸಾವಿರದ 652 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3 ಕೋಟಿಯ 04 ಲಕ್ಷದ 29 ಸಾವಿರದ 339ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 17 ಲಕ್ಷದ 18 ಸಾವಿರದ 439 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 45 ಕೋಟಿಯ 09 ಲಕ್ಷದ 11 ಸಾವಿರದ 712 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ದೇಶಾದ್ಯಂತ ಕೋವಿಡ್-19 ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 41 ಕೋಟಿಯ 78 ಲಕ್ಷ ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.