ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮೊನ್ನೆಗಿಂತ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. 48 ಸಾವಿರದ 786 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,005 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಪ್ರಸಕ್ತ ಒಟ್ಟು ಸೋಂಕಿತರ ಸಂಖ್ಯೆ 5 ಲಕ್ಷದ 23 ಸಾವಿರದ 257ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3 ಲಕ್ಷದ 99 ಸಾವಿರದ 459ಕ್ಕೆ ಏರಿಕೆಯಾಗಿದೆ. ಸಕ್ರಿಯ ಸೋಂಕಿತರ ಸಂಖ್ಯೆದೇಶದಲ್ಲಿ 5 ಲಕ್ಷದ 23 ಸಾವಿರದ 257 ಆಗಿದೆ.
ಕಳೆದ 24 ಗಂಟೆಗಳಲ್ಲಿ 61 ಸಾವಿರದ 588 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2 ಕೋಟಿಯ 94 ಲಕ್ಷದ 88 ಸಾವಿರದ 918ಕ್ಕೆ ತಲುಪಿದೆ.
ಭಾರತದಲ್ಲಿ ನಿನ್ನೆ 19 ಲಕ್ಷದ 21 ಸಾವಿರದ 450 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದುವರೆಗೆ 41 ಕೋಟಿಯ 20 ಲಕ್ಷದ 21 ಸಾವಿರದ 494 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ನಿನ್ನೆ 19 ಲಕ್ಷದ 21 ಸಾವಿರದ 450 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದುವರೆಗೆ 41 ಕೋಟಿಯ 20 ಲಕ್ಷದ 21 ಸಾವಿರದ 494 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.