ನವದೆಹಲಿ: ಕಳೆದ 118 ದಿನಗಳಲ್ಲಿ ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಕಡಿಮೆ ಕೋವಿಡ್-19 ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಹೊತ್ತಿಗೆ ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 31,443 ಹೊಸ ಕೊರೋನಾ ಕೇಸುಗಳು ಪತ್ತೆಯಾಗಿವೆ. ಗುಣಮುಖ ಹೊಂದಿದವರ ಸಂಖ್ಯೆ ಶೇಕಡಾ 97.28ಕ್ಕೇರಿದೆ. 2,020 ಸಾವುಗಳೊಂದಿಗೆ ಮೃತರ ಸಂಖ್ಯೆ 4,10,784 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 4 ಲಕ್ಷದ 31 ಸಾವಿರದ 315ಕ್ಕೆ ಇಳಿಕೆಯಾಗಿದ್ದು, ಕಳೆದ 109 ದಿನಗಳಲ್ಲಿ ಅತ್ಯಂತ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ 49,007 ಮಂದಿ ರೋಗಿಗಳು ಗುಣಮುಖ ಹೊಂದಿದ್ದಾರೆ. ದೇಶದಲ್ಲಿ ಸಕ್ರಿಯ ಕೊರೋನಾ ಸೋಂಕಿತರ ಸಂಖ್ಯೆ ಶೇಕಡಾ 1.40ರಷ್ಟಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 49,007 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3 ಲಕ್ಷದ 63 ಸಾವಿರದ 720ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 17 ಲಕ್ಷದ 40 ಸಾವಿರದ 325 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 43 ಕೋಟಿಯ 40 ಲಕ್ಷದ 58 ಸಾವಿರದ 138 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 39.46 ಕೋಟಿಗೂ ಅಧಿಕ ಲಸಿಕೆಯನ್ನು ನೀಡಿದೆ. 1.91 ಕೋಟಿಗೂ ಅಧಿಕ ಉಳಿದಿರುವ ಮತ್ತು ಬಳಕೆಯಾಗದಿರುವ ಡೋಸ್ ಗಳು ಇನ್ನೂ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿದೆ. ಇಂದು ಬೆಳಗ್ಗೆ 8 ಗಂಟೆಯ ಹೊತ್ತಿಗೆ ದೇಶದಲ್ಲಿ ಒಟ್ಟು ನಿರುಪಯೋಗ ಡೋಸ್ ಗಳು ಸೇರಿ 37 ಕೋಟಿಯ 55 ಲಕ್ಷದ 38 ಸಾವಿರದ 390 ಡೋಸ್ ಗಳು ಬಳಕೆಯಾಗಿದೆ ಎಂದು ಸರ್ಕಾರ ಹೇಳಿದೆ.