ನವದೆಹಲಿ; ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 39,361 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 416 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಸೋಮವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31,450,623ಕ್ಕೆ ತಲುಪಿದ್ದು, ಸಾವಿನ 4,20,967ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,11,189ಕ್ಕೆ ಕುಸಿದಿದೆ.