HEALTH TIPS

ದೇಶದಲ್ಲಿ ಕೋವಿಡ್-19 ಲಸಿಕೆ ಪಡೆದವರ ಸಂಖ್ಯೆ 41 ಕೋಟಿ ದಾಟಿದೆ- ಕೇಂದ್ರ ಆರೋಗ್ಯ ಸಚಿವಾಲಯ

            ನವದೆಹಲಿ: ದೇಶದಲ್ಲಿ ಕೋವಿಡ್-19 ಲಸಿಕೆ ಪಡೆದವರ ಸಂಖ್ಯೆ 41 ಕೋಟಿಯನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಸಂಜೆ ಏಳು ಗಂಟೆಯವರೆಗಿನ ತಾತ್ಕಾಲಿಕ ವರದಿ ಪ್ರಕಾರ, ಸೋಮವಾರದವರೆಗೂ 47,77,697 ಡೋಸ್ ಲಸಿಕೆಗಳನ್ನು ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.

            18-44 ವರ್ಷದೊಳಗಿನ 22,38,900 ಜನರಿಗೆ ಲಸಿಕೆಯ ಮೊದಲ ಡೋಸ್ ಮತ್ತು 1,48,075 ಜನರಿಗೆ ಲಸಿಕೆಯ ಎರಡನೇ ಡೋಸ್ ನೀಡಲಾಗಿದೆ ಎಂದು ಸಚಿವಾಲಯ ಸೋಮವಾರ ತಿಳಿಸಿದೆ.

ಒಟ್ಟಾರೆಯಾಗಿ, ವ್ಯಾಕ್ಸಿನೇಷನ್ ಡ್ರೈವ್ ನ ಹಂತ -3 ಪ್ರಾರಂಭವಾದಾಗಿನಿಂದ 18-44 ವಯಸ್ಸಿನ 12,73,70,809 ಜನರು ತಮ್ಮ ಮೊದಲ ಡೋಸ್ ಮತ್ತು 50,58,284 ಜನರು ತಮ್ಮ ಎರಡನೇ ಡೋಸ್ ಅನ್ನು ಪಡೆದಿದ್ದಾರೆ.

             ಮೂರು ರಾಜ್ಯಗಳಾದ ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಹೆಚ್ಚು ಜನರಿಗೆ ಮೊದಲ ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ.

ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದ 18-44 ವರ್ಷದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಲಸಿಕೆಯ ಮೊದಲ‌ ಡೋಸ್ ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries