HEALTH TIPS

ಕೋವಿಡ್-19 ಸೋಂಕಿತರ ಸಂಖ್ಯೆ ಗಣನೀಯ ಏರಿಕೆ; ಇಂದು ದೇಶಾದ್ಯಂತ 43,654 ಹೊಸ ಪ್ರಕರಣಗಳು ಪತ್ತೆ, 640 ಮಂದಿ ಸಾವು

              ನವದೆಹಲಿಭಾರತದಲ್ಲಿ 2ನೇ ಅಲೆ ಬಳಿಕ ಇಳಿಕೆಯಾಗಿದ್ದ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಇದೀಗ ಕ್ರಮೇಣ ಏರಿಕೆಯಾಗುತ್ತಿದ್ದು, ದೇಶದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 43,654 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದೆ.


          ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 43,654 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 640 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೋವಿಡ್-19 ದೇಶದಲ್ಲಿ ಈ ವರೆಗೂ ಬಲಿಯಾದವರ ಸಂಖ್ಯೆ 4,22,022ಕ್ಕೆ ಏರಿಕೆಯಾಗಿದೆ.

      ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 41,678 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ 3,06,63,147ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,99,436 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

          ಅಂತೆಯೇ ದೇಶದಲ್ಲಿ ನಡೆಯುತ್ತಿರುವ ಲಸಿಕೆ ಅಭಿಯಾನದಲ್ಲಿ ಈ ವರೆಗೂ 44.61ಕೋಟಿ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ. ಅಲ್ಲದೆ ದೇಶದಲ್ಲಿ ಈ ವರೆಗೂ ನಡೆಸಿದ ಕೋವಿಡ್ ಪರೀಕ್ಷೆ ಪ್ರಮಾಣ ಕೂಡ 46.09 ಕೋಟಿಗೇರಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries