ಕುಂಬಳೆ: ಗಡಿನಾಡ ಯಕ್ಷಗಾನ ಅಕಾಡೆಮಿ ಕಾಸರಗೋಡು ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಕರ್ನಾಟಕ ಗಡಿಪ್ರದೇಶ ಅಭಿವೃದ್ದಿ ಪ್ರಾಧಿಕಾರ, ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕ, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಸಹಕಾರದೊಂದಿಗೆ ಆ.1 ರಿಂದ ಮನೆ-ಮನೆಯಲ್ಲಿ ಯಕ್ಷಗಾನ ಸರಣಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದೆ.
ಕಾರ್ಯಕ್ರಮವು ಆ.1 ರಂದು ಬೆಳಿಗ್ಗೆ 10ಕ್ಕೆ ಜೋಡುಕಲ್ಲಿನ ಜಿ.ಕೆ.ವಿ.ಸಭಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ. ಮಂಜೇಶ್ವರ ಶಾಸಕ ಎ.ಕೆ.ಎಂ.ಅ|ಶ್ರಫ್ ಸರಣಿ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ಜಾನಪದ ಪರಿಷತ್ತು ಕೇರಳ ಘಟಕ ಹಾಗೂ ಕನ್ನಡ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಅಧ್ಯಕ್ಷತೆ ವಹಿಸುವರು. ಕೇರಳ ಸರ್ಕಾರದ ಪಾರ್ತಿಸುಬ್ಬ ಯಕ್ಷಗಾನ ಕಲಾಕ್ಷೇತ್ರದ ಅಧ್ಯಕ್ಷ ಎಂ.ಶಂಕರ ರೈ ಮಾಸ್ತರ್, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಪೈವಳಿಕೆ ಗ್ರಾ.ಪಂ.ಸ್ಥಾಯೀ ಸಮಿತಿ ಅಧ್ಯಕ್ಷ ಝಡ್ ಎ.ಕಯ್ಯಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಯೋಗೀಶ ರಾವ್ ಚಿಗುರುಪಾದೆ, ಪೈವಳಿಕೆ ಸೇ.ಸ.ಬ್ಯಾಂಕ್ ಅಧ್ಯಕ್ಷ ಅಶ್ವಥ್ ಪೂಜಾರಿ ಲಾಲ್‍ಬಾಗ್ ಉಪಸ್ಥಿತರಿರುವರು. ಗಡಿನಾಡ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ಗುರು ಜಯರಾಮ ಪಾಟಾಳಿ ಪಡುಮಲೆ ಸರಣಿ ಕಾರ್ಯಕ್ರಮಗಳ ನೇತೃತ್ವ ವಹಿಸುವರು.