ಇಂದು ಕರ್ನಾಟಕ ಸಿಎಂ ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಕೊರೊನಾ ಅನ್‌ಲಾಕ್-4ರ ಬಗ್ಗೆ ಚರ್ಚೆ ನಡೆಸಿದರು.
ಸಭೆಯಲ್ಲಿ ಚಿತ್ರಮಂದಿರಗಳನ್ನು ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ನಾಳೆಯಿಂದ ತೆರಯುವುದಕ್ಕೆ ಅವಕಾಶ ನೀಡಿದೆ. ಅಲ್ಲದೇ, ನಾಳೆಯಿಂದ ನೈಟ್ ಕರ್ಫ್ಯೂನಲ್ಲೂ ಬದಲಾವಣೆ ಮಾಡಲಾಗಿದ್ದು, ರಾತ್ರಿ 10 ರಿಂದ ಬೆಳಗ್ಗೆ 5 ರ ವರಗೆ ವಿಧಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಚಿತ್ರಮಂದಿರಗಳು, ರಂಗಮಂದಿರಗಳನ್ನು ಶೇ.50ರಷ್ಟು ಗ್ರಾಹಕರೊಂದಿಗೆ ತೆರೆಯಲು ಅವಕಾಶ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಜುಲೈ 26ರಿಂದ ಪದವಿ ತರಗತಿಗಳನ್ನು ತೆರಯಲೂ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗಳಿಗೆ ಕೊರೊನಾ ಲಸಿಕೆ ಪಡೆಯುವುದು ಕಡ್ಡಾಯವಾಗಿದೆ.
ದೇವಾಲಯಗಳಲ್ಲಿ ಪೂಜೆ ಪುನಸ್ಕಾರಕ್ಕೆ ಅವಕಾಶ ನೀಡಿದ್ದು, ಕೊರೊನಾ ನಿಯಮಾನುಸಾರ ಪೂಜೆ ಪುನಸ್ಕಾರಕ್ಕೆ ಅನುಮತಿ ನೀಡಲಾಗಿದೆ.
ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಲಾಗಿದ್ದು, ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕೊರೊನಾ ನಿಯಮ ಪಾಲಿಸಲು ಸೂಚನೆ ನೀಡಲಾಗಿದೆ.