ವಾಷಿಂಗ್ಟನ್: ಅಮೆರಿಕದ ವಿದೇಶಾಂಗ ಸಚಿವ ಆಂಟನಿ ಬ್ಲಿಂಕನ್ ಜುಲೈ 27ರಂದು ಭಾರತಕ್ಕೆ ಬರಲಿದ್ದು, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ 'ಎಎನ್‌ಐ' ಟ್ವೀಟ್ ಮಾಡಿದೆ.
ಬ್ಲಿಂಕನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿಯಾಗುವ ಸಾಧ್ಯತೆ ಇದೆ ಎಂದೂ ಟ್ವೀಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಈ ವರ್ಷದ ಕೊನೆಯಲ್ಲಿ ಭಾರತ, ಜಪಾನ್, ಆಸ್ಟ್ರೇಲಿಯಾ ಮತ್ತು ಅಮೆರಿಕದ ನಾಯಕರ ಶೃಂಗಸಭೆ ವಾಷಿಂಗ್ಟನ್‌ನಲ್ಲಿ ನಡೆಯಲಿದ್ದು, ಆ ನಿಟ್ಟಿನಲ್ಲಿ ಸಿದ್ಧತೆಗಾಗಿ ಬ್ಲಿಂಕನ್ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ.