HEALTH TIPS

ಟೋಕಿಯೋ ಒಲಂಪಿಕ್ಸ್: 3-2 ಗೋಲುಗಳಿಂದ ನ್ಯೂಜಿಲೆಂಡ್ ಸೋಲಿಸಿ ಭಾರತ ಹಾಕಿ ಪುರುಷರ ತಂಡದ ಶುಭಾರಂಭ

            ಟೋಕಿಯೋ: ಹರ್ಮನ್‌ಪ್ರೀತ್ ಸಿಂಗ್ ಬಾರಿಸಿದ ಎರಡು ಗೋಲು ಹಾಗೂ ಗೋಲ್‌ ಕೀಪರ್ ಪಿ.ಆರ್. ಶ್ರೀಜೇಶ್ ಮನೋಜ್ಞ ಪ್ರದರ್ಶನದ ನೆರವಿನಿಂದ ಭಾರತ ಹಾಕಿ ತಂಡವು ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು 3-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿದೆ. ಇದರೊಂದಿಗೆ ಮನ್‌ಪ್ರೀತ್ ಸಿಂಗ್‌ ನೇತೃತ್ವದ ಭಾರತ ಹಾಕಿ ತಂಡವು ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಶುಭಾರಂಭ ಮಾಡಿದೆ.

            ನಾಲ್ಕನೇ ಶ್ರೇಯಾಂಕಿತ ಮನ್‌ಪ್ರೀತ್‌ ಸಿಂಗ್ ನೇತೃತ್ವದ ಭಾರತ ಪುರುಷರ ಹಾಕಿ ತಂಡವು ಗೆಲುವಿನ ಶುಭಾರಂಭ ಮಾಡುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿದಿತ್ತು. ಪಂದ್ಯದ ಆರನೇ ನಿಮಿಷದಲ್ಲಿ ಕೇನ್‌ ರಸೆಲ್ ತಮಗೆ ಸಿಕ್ಕ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು.

           ಇದರೊಂದಿಗೆ ನ್ಯೂಜಿಲೆಂಡ್ ಹಾಕಿ ತಂಡವು ಮೊದಲ ಕ್ವಾರ್ಟರ್‌ನ ಆರಂಭದಲ್ಲೇ 1-0 ಮುನ್ನಡೆ ಸಾಧಿಸಿತು. ಇದಾಗಿ ಕೆಲ ಹೊತ್ತಿನಲ್ಲೇ, ಅಂದರೆ ಪಂದ್ಯದ 10ನೇ ನಿಮಿಷದಲ್ಲಿ ರೂಪಿಂದರ್ ಪಾಲ್‌ ಗೋಲು ಬಾರಿಸುವ ಭಾರತದ ಗೋಲುಗಳ ಖಾತೆ ತೆರೆದರು. ಭಾನುವಾರ ಆಸ್ಟ್ರೇಲಿಯಾ ಜೊತೆ ಭಾರತ ತಂಡ ಪಂದ್ಯವಾಡುವ ಸಾಧ್ಯತೆಯಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries