ನವದೆಹಲಿ: ಮಾರಕ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸಾಧಿಸಿದ್ದು, 34 ಡೋಸ್ ಲಸಿಕೆ ವಿತರಣೆ ಮಾಡಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಶುಕ್ರವಾರ ಬೆಳಗ್ಗೆ 7 ಗಂಟೆಯವರೆಗೆ ದೇಶಾದ್ಯಂತ ಒಟ್ಟು 34,00,76,232 ಡೋಸ್ ಲಸಿಕೆ ನೀಡಲಾಗಿದೆ.
ಕಳೆದ 24 ಗಂಟೆಗಳಲ್ಲಿ 42 ಲಕ್ಷ ಡೋಸ್ ಲಸಿಕೆಯನ್ನು ನೀಡಲಾಗಿದ್ದು, ಇದರಲ್ಲಿ 32,80,998 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 9,83,125 ಫಲಾನುಭವಿಗಳಿಗೆ 2ನೇ ಡೋಸ್ ಲಸಿಕೆ ನೀಡಲಾಗಿದೆ.
ಗುರುವಾರ 18-44 ವರ್ಷ ವಯಸ್ಸಿನ 24,51,539 ಫಲಾನುಭವಿಗಳಿಗೆ ಮೊದಲ ಡೋಸ್ ಮತ್ತು 89,027 ಫಲಾನುಭವಿಗಳಿಗೆ 2ನೇ ಡೋಸ್ ಲಸಿಕೆ ನೀಡಲಾಗಿದೆ.
ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ತಮಿಳುನಾಡು, ಬಿಹಾರ, ಗುಜರಾತ್, ಕರ್ನಾಟಕ, ಮತ್ತು ಮಹಾರಾಷ್ಟ್ರ ಸೇರಿದಂತೆ 8 ರಾಜ್ಯಗಳು 18-44 ವರ್ಷದೊಳಗಿನ 50 ಲಕ್ಷಕ್ಕೂ ಹೆಚ್ಚು ಕೋವಿಡ್-19 ಲಸಿಕೆಯನ್ನು ನೀಡಿವೆ ಎಂದು ಪ್ರಕಟಣೆ ತಿಳಿಸಿದೆ.