ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿಗಳು ರಕ್ಷಣಾ ಕಾರ್ಯ ಮುಂದುವರಿದಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿರಂತರವಾಗಿ ಗಮನಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ವಿದಿಶಾ ಜಿಲ್ಲೆಯ ಗಂಜ್ ಬಸೊಡ ಎಂಬಲ್ಲಿ ಈ ಘಟನೆ ಸಂಭವಿಸಿದೆ.
ಬಾವಿಯ ಪಕ್ಕ ಆಟವಾಡುತ್ತಿದ್ದ ಬಾಲಕಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಳು, ಕೂಡಲೇ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಲುಪಿಸಿದರು. ನಿನ್ನೆ ಸಾಯಂಕಾಲ ರಕ್ಷಣಾ ಕಾರ್ಯ ನಡೆಯುತ್ತಿದ್ದ ವೇಳೆ ಅದನ್ನು ವೀಕ್ಷಿಸಲು ಸೇರಿದ್ದ ಜನರು ದಿಢೀರನೆ ಮಣ್ಣು ಕುಸಿದು ಬಿದ್ದು ಬಾವಿಗೆ ಬಿದ್ದಿದ್ದಾರೆ. ಜನರು ಬಾಲಕಿಯನ್ನು ರಕ್ಷಿಸಲು ನೋಡುತ್ತಿದ್ದ ವೇಳೆ ಬಾವಿಯ ಗೋಡೆ ಕುಸಿದು ಬಿದ್ದಿದ್ದಾರೆ ಎಂದು ಭೋಪಾಲ್ ವಿಭಾಗೀಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸಾಯಿ ಮನೋಹರ್ ತಿಳಿಸಿದ್ದಾರೆ.
ಕಳೆದ ಮಧ್ಯರಾತ್ರಿ 23 ಮಂದಿಯನ್ನು ರಕ್ಷಿಸಿ 13 ಮಂದಿಯನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದಿಶಾ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮಧ್ಯ ಪ್ರದೇಶ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಕೈಲಾಶ್ ಸಾರಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ಬಾಲಕಿ ಇನ್ನೂ ಬಾವಿಯೊಳಗಿದ್ದು ಬಾವಿಯ ಗೋಡೆ ಕುಸಿದಾಗ ಆಕೆಗೂ ಗಾಯವಾಗಿತ್ತೇ ಎಂದು ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಪರಿಹಾರ: ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರ ಕುಟುಂಬಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದೆ.