ಕಣ್ಣೂರು: ಕಣ್ಣೂರು ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕಿಯನ್ನು ತಾಯಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಝಿಕ್ಕುನ್ನಿನಲ್ಲಿರುವ ಮನೆಯಲ್ಲಿ ಅವಂತಿಕಾ ಬೆಳಿಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ತಂದೆ ರಾಜೇಶ್ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಿದರೂ ಉಳಿಸಲಾಗಲಿಲ್ಲ. ಸದ್ಯ ಬಾಲಕಿಯ ತಾಯಿ ವಾಹಿದಾಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ವಾಹಿದಾಳ ಕುಟುಂಬ ಸದಸ್ಯರು ಸ್ವಲ್ಪ ಸಮಯದಿಂದ ಮಾನಸಿಕವಾಗಿ ಅಸ್ಥಿರವಾಗಿದ್ದರು ಎಂದು ಹೇಳಿದ್ದಾರೆ.