ತಿರುವನಂತಪುರ: ಎಸ್.ಎಸ್.ಎಲ್.ಸಿ. ಮತ್ತು ಪ್ಲಸ್ ಟು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡದಿರುವ ನಿರ್ಧಾರದಿಂದ ಸರ್ಕಾರ ಹಿಂಪಡೆಯಬೇಕು ಎಂದು ಎಬಿವಿಪಿ ಒತ್ತಾಯಿಸಿದೆ. ಈ ನಿರ್ಧಾರವು ವಿದ್ಯಾರ್ಥಿ ಸಮುದಾಯಕ್ಕೆ ಸವಾಲಾಗಿದೆ ಎಂದು ಎಬಿವಿಪಿ ಹೇಳಿಕೆಯಲ್ಲಿ ತಿಳಿಸಿದೆ.
ಕೊರೋನಾ ಅವಧಿಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿದ ಕೇರಳದ ವಿದ್ಯಾರ್ಥಿಗಳಿಗೆ ಸರ್ಕಾರದ ನಿರ್ಧಾರ ಅನ್ಯಾಯವಾಗಿದೆ. ಸೋಂಕಿನ ವೇಳೆ ಎನ್ ಎಸ್ ಎಸ್, ಎನ್‍ಸಿಸಿ ಮತ್ತು ವಿದ್ಯಾರ್ಥಿ ಪೋಲೀಸ್ ಕೆಡೆಟ್ ಗಳು ಸಕ್ರಿಯವಾಗಿತ್ತು. ಅನೇಕ ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಎಬಿವಿಪಿ ಗಮನಸೆಳೆದಿದೆ.
ಸಾಮಾಜಿಕ ಬಿಕ್ಕಟ್ಟಿನ ಈ ಕಾಲದಲ್ಲಿ ಇಂತಹ ಸೇವಾ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ಒದಗಿಸುವ ಶಕ್ತಿ ಅಮೂಲ್ಯ. ಆದರೆ ಈ ಶೈಕ್ಷಣಿಕ ವರ್ಷದಲ್ಲಿ ಗ್ರೇಸ್ ಮಾಕ್ರ್ಸ್ ನೀಡದಿರುವ ನಿರ್ಧಾರ ವಿದ್ಯಾರ್ಥಿ ಸಮುದಾಯವನ್ನು ವಂಚಿಸಿದ್ದಕ್ಕೆ ಸಮಾನವಾಗಿದೆ. ಇದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಎಬಿವಿಪಿ ಬೊಟ್ಟುಮಾಡಿದೆ.
ನಿರ್ಧಾರವನ್ನು ಹಿಂಪಡೆಯಬೇಕು ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಎಬಿವಿಪಿ ಒತ್ತಾಯಿಸಿದೆ. ಕೊರೋನಾ ಹರಡುವ ಹಿನ್ನೆಲೆಯಲ್ಲಿ ಕಲೆ ಮತ್ತು ಕ್ರೀಡಾ ಸ್ಪರ್ಧೆಗಳು ಸೇರಿದಂತೆ ಪಠ್ಯೇತರ ಚಟುವಟಿಕೆಗಳು ನಡೆಯದಿರುವ ಹಿನ್ನೆಲೆಯಲ್ಲಿ ಗ್ರೇಸ್ ಮಾರ್ಕ್ ನೀಡದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.