ಕಾಸರಗೋಡು: ಮಹಿಳಾ ದೌರ್ಜನ್ಯ, ಎಡರಂಗ ಸರ್ಕಾರದ ಭ್ರಷ್ಟಾಚಾರಗಳಿಂದ ರಾಜ್ಯದ ಜನತೆ ತಲೆತಗ್ಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಹಿಳಾ ಮೋರ್ಚಾ ಜಿಲ್ಲಾ ಸಮಿತಿ ಕಾರ್ಯದರ್ಶಿ, ನಗರಸಭಾ ಸದಸ್ಯೆ ಸವಿತಾ ಟೀಚರ್ ತಿಳಿಸಿದ್ದಾರೆ.
ಅವರು ವಂಡಿಪರಿಯಾರ್‍ನಲ್ಲಿ ಮಹಿಳೆಯನ್ನು ಅತ್ಯಾಚಾರ ನಡೆಸಿದ ಆರೋಪಿಗೆ ತಕ್ಕ ಶಿಕ್ಷೆ ವಿಧಿಸಬೇಕು, ರಾಜ್ಯದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಬೇಕು ಮುಂತಾದ ಬೇಡಿಕೆ ಮುಂದಿರಿಸಿ ಮಹಿಳಾ ಮೋರ್ಚಾ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಧರಣಿ ಉದ್ಘಾಟಿಸಿ ಮಾತನಾಡಿದರು. ಮಹಿಳಾ ಮೋರ್ಚಾ ಕಾಸರಗೋಡು ಮಂಡಲ ಸಮಿತಿ ಕಾರ್ಯದರ್ಶಿ ಪುಷ್ಪಾ ಅಧ್ಯಕ್ಷತೆ ವಹಿಸಿದ್ದರು. ನೇತಾರರಾದ ಎಂ. ಉಮಾ, ಟಿ.ಕೆ ಜನನಿ, ಉಷಾ ಸುರೇಶ್, ಸಮಿತಾ ಸುಧಾಕರನ್, ಕೆ. ರಾಧಾ ಪಚ್ಚಕ್ಕಾಡ್, ಕೆ. ಭವ್ಯಾ ಉಪಸ್ಥಿತರಿದ್ದರು. ಎಂ. ಶ್ರೀಲತಾ ಟೀಚರ್ ಸ್ವಾಗತಿಸಿದರು.