ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯು ಸೌಹಾರ್ದಯುತವಾಗಿತ್ತು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಪ್ರಧಾನಿಗಳು ರಾಜ್ಯದ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿರುವರು ಮತ್ತು ಹೊಸ ಯೋಜನೆಗಳನ್ನು ಕೈಗೊಳ್ಳಲು ಪೆÇ್ರೀತ್ಸಾಹಿಸಿರುವರು ಎಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಮಾಹಿತಿ ನೀಡಿದರು.
ಪ್ರಧಾನ ಮಂತ್ರಿಯೊಂದಿಗೆ ಹಲವಾರು ಫಲಪ್ರದ ಚರ್ಚೆಗಳು ನಡೆದವು. ಕೇರಳದ ಅಭಿವೃದ್ಧಿಗೆ ಏನು ಬೇಕಾದರೂ ಮಾಡಲು ಸಿದ್ಧ ಎಂದು ಪ್ರಧಾನಿ ಭರವಸೆ ನೀಡಿದರು. ದೇಶದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದರು.
ರೈಲ್ವೇ ಸಿಲ್ವರ್ ಲೈನ್ ಯೋಜನೆ ಮತ್ತು ಕೇರಳದ ಅರೆ ಹೈಸ್ಪೀಡ್ ರೈಲ್ವೆ ಯೋಜನೆಯನ್ನು ಪ್ರಧಾನಮಂತ್ರಿಯ ಗಮನಕ್ಕೆ ತರಲಾಗಿದೆ ಎಂದು ಸಿಎಂ ಹೇಳಿದರು. ಈ ಬಗ್ಗೆ ಪ್ರಧಾನಿ ಹೆಚ್ಚಿನ ಮಾಹಿತಿ ಕೋರಿದ್ದಾರೆ. ರಾಜ್ಯದ ಒಳನಾಡಿನ ಜಲಮಾರ್ಗ ಯೋಜನೆ ಬಗ್ಗೆಯೂ ಚರ್ಚಿಸಲಾಯಿತು. ಮಾತುಕತೆ ಮುಗಿದ ಕೂಡಲೇ ಯೋಜನೆ ಪೂರ್ಣಗೊಳ್ಳಲಿದೆ ಎಂದು ಆಶಿಸಿದ್ದಾರೆ ಎಂದು ಸಿಎಂ ಹೇಳಿದರು.
ಪ್ರಧಾನ ಮಂತ್ರಿಯೊಂದಿಗಿನ ಸಭೆಯಲ್ಲಿ ರಾಜ್ಯದಲ್ಲಿ ಕೊರೋನಾ ವಿಸ್ತರಣೆಯ ಬಗ್ಗೆ ಸುಧೀರ್ಘ ಚರ್ಚೆ ನಡೆಯಿತು. ಸೋಂಕಿನ ಹಿನ್ನಡೆಯು ಮಂದಗತಿಯಲ್ಲಿರುವುದರಿಂದ ಈ ಬಗ್ಗೆ ಸಮಗ್ರ ಚರ್ಚೆ ನಡೆಯಿತು. ರಾಜ್ಯದಲ್ಲಿ ವ್ಯಾಕ್ಸಿನೇಷನ್ ನ್ನು ಇನ್ನಷ್ಟು ಹೆಚ್ಚಿಸಬೇಕು ಮತ್ತು ವೇಗ ಪಡೆಯಬೇಕು ಎಂದು ಮುಖ್ಯಮಂತ್ರಿ ಪ್ರಧಾನಿಗೆ ತಿಳಿಸಿದರು.