ಕೋಝಿಕೋಡ್: ಅಂಗಡಿಗಳಲ್ಲಿನ ದಟ್ಟಣೆಯನ್ನು ನಿಯಂತ್ರಿಸಲು ಟೋಕನ್ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಪೊಲೀಸರು ಒತ್ತಾಯಿಸಿದ್ದಾರೆ. ನಗರ ಪ್ರದೇಶಗಳಲ್ಲಿ ಅಂಗಡಿಗಳಲ್ಲಿನ ದಟ್ಟಣೆಯನ್ನು ನಿಯಂತ್ರಿಸಲು ಇಂತಹ ವ್ಯವಸ್ಥೆ ಫಲಕಾರಿಯಾಗಲಿದೆ ಎಂದು ನಂಬಲಾಗಿದೆ. ಈ ನಿಟ್ಟಿನಲ್ಲಿ ಅಂಗಡಿ ಮಾಲೀಕರಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಕೋಝಿಕೋಡ್ ದಕ್ಷಿಣ ಡಿಸಿಪಿ ಮಹಾಜನ್ ತಿಳಿಸಿದ್ದಾರೆ.
ಕೊರೋನಾ ನಿರ್ಬಂಧಗಳಿಂದ ವಿನಾಯಿತಿ ನೀಡಲಾಗಿದ್ದರೂ, ಪ್ರೋಟೋಕಾಲ್ ಅನುಸರಣೆ ಖಚಿತಪಡಿಸಿಕೊಳ್ಳಲು ನಗರದಲ್ಲಿ ಪೊಲೀಸರನ್ನು ನಿಯೋಜಿಸಲಾಗುವುದು. ನಿರ್ಬಂಧಗಳನ್ನು ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.ಮಿಠಾಯಿ ಮಾರ್ಕೆಟ್ ಸಹಿತ ಇತರ ಪ್ರದೇಶಗಳಲ್ಲಿ ಪ್ರವೇಶವನ್ನು ನಿರ್ಬಂಧಿಸುವ ಯೋಜನೆಗಳಿವೆ.