ನವದೆಹಲಿ: ಚುನಾವಣೆ ಎದುರಿಸಲಿರುವ ಪಂಜಾಬ್ ನಲ್ಲಿ ಆಡಳಿತಾರೂಢ ಕಾಂಗ್ರೆಸ್ ಗೆ ಹೊಸ ಸಾರಥಿಯ ನೇಮಕವಾಗಲಿದೆ.
ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಅವರ ವಿರೋಧದ ನಡುವೆಯೇ ನವಜೋತ್ ಸಿಂಗ್ ಸಿಧು ಅವರನ್ನು ಕಾಂಗ್ರೆಸ್ ನ ಪಂಜಾಬ್ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೇಮಕಗೊಳಿಸಿದ್ದಾರೆ.
ನವಜೋತ್ ಸಿಂಗ್ ಸಿಧು ಅವರೊಂದಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನೂ ನೇಮಕ ಮಾಡಲಾಗಿದೆ. ಸಂಗತ್ ಸಿಂಗ್ ಗಿಲ್ಝಿಯಾನ್, ಸುಖ್ವಿಂದರ್ ಸಿಂಗ್ ದನ್ನಿ, ಪವನ್ ಗೋಯಲ್ ಹಾಗೂ ಕುಲ್ಜಿತ್ ಸಿಂಗ್ ನಗ್ರಾ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ನಿರ್ಗಮಿತ ಅಧ್ಯಕ್ಷ ಸುನಿಲ್ ಜಖರ್ ಅವರ ಕೊಡುಗೆಯನ್ನು ಮೆಚ್ಚುತ್ತದೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ.