ನವದೆಹಲಿ: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಹರಡುವಿಕೆ ಆತಂಕದ ನಡುವೆ ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಬೆಲೆಯನ್ನು ಹೆಚ್ಚಿಸುವುದಕ್ಕೆ ಸರ್ಕಾರ ಚಿಂತಿಸುತ್ತಿದೆ ಎಂದು ಸಿಎನ್ ಬಿಸಿ ಟಿವಿ-18 ವರದಿ ಮಾಡಿದೆ.
ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಗಳು ಮತ್ತಷ್ಟು ದುಬಾರಿ ಆಗಲಿವೆ.
ಒಂದು ಡೋಸ್ ಕೊವಿಶೀಲ್ಡ್ ಲಸಿಕೆಗೆ 205 ರೂಪಾಯಿ ಜೊತೆಗೆ ಶೇ.5ರಷ್ಟು ಜಿಎಸ್ ಟಿ ನಿಗದಿಗೊಳಿಸಲಾಗಿದೆ. ಅದೇ ರೀತಿ ಕೊವ್ಯಾಕ್ಸಿನ್ ಲಸಿಕೆಗೆ ಒಂದು ಡೋಸ್ ಪಡೆಯಲು 215 ರೂಪಾಯಿ ಜೊತೆ ಶೇ.5ರಷ್ಟು ಜಿಎಸ್ ಟಿ ನೀಡಬೇಕಾಗುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ. 2021ರ ವರ್ಷಾಂತ್ಯದ ವೇಳೆಗೆ ಅರ್ಹ ಫಲಾನುಭವಿಗಳಿಗೆ ಲಸಿಕೆ ನೀಡುವುದಕ್ಕೆ ಸರ್ಕಾರದ ಸಿದ್ಧತೆ ಹೇಗಿದೆ. ಯಾವ ಕಂಪನಿಗಳಿಂದ ಎಷ್ಟು ಲಸಿಕೆ ಪೂರೈಕೆ ಆಗುತ್ತದೆ. ಎಷ್ಟು ಕಂಪನಿಗಳ ಲಸಿಕೆಗೆ ದೇಶದಲ್ಲಿ ಅನುಮೋದನೆ ನೀಡಲಾಗಿದೆ. ಇದರ ಹೊರತಾಗಿ ಈವರೆಗೂ ಎಷ್ಟು ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಪ್ರಸ್ತುತ ಹೊಸ ಸೋಂಕಿತರು ಮತ್ತು ಗುಣಮುಖರ ಸಂಖ್ಯೆ ಹಾಗೂ ನಡುವಿನ ವ್ಯತ್ಯಾಸ ಎಷ್ಟಿದೆ ಎಂಬುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.
94 ಕೋಟಿ ಫಲಾನುಭವಿಗಳಿಗೆ ಲಸಿಕೆ ವಿತರಿಸುವ ಗುರಿಭಾರತದಲ್ಲಿ 2021ರ ಡಿಸೆಂಬರ್ ವೇಳೆಗೆ 94 ಕೋಟಿ ಅರ್ಹ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡುವ ಗುರಿಯನ್ನು ಹೊಂದಲಾಗಿದೆ. ಆ ಮೂಲಕ ಕೊವಿಡ್-19 ಸೋಂಕು ನಿಯಂತ್ರಿಸುವ ಉದ್ದೇಶವನ್ನು ಹೊಂದಲಾಗಿದೆ. ಈ ನಿಟ್ಟಿನಲ್ಲಿ ಭಾರತೀಯ ಕಂಪನಿಗಳ ಜೊತೆಗೆ ಎರಡು ವಿದೇಶಿ ಕಂಪನಿಗಳ ಲಸಿಕೆಗೂ ದೇಶದಲ್ಲಿ ಅನುಮೋದನೆ ನೀಡಲಾಗಿದೆ. ವಿದೇಶಿ ಕಂಪನಿಗಳ ಲಸಿಕೆಯನ್ನು ಆಮದು ಮಾಡಿಕೊಳ್ಳುವುದಕ್ಕೂ ಕಾರ್ಯಯೋಚನೆ ರೂಪಿಲಾಗುತ್ತಿದೆ. ಅಷ್ಟಾಗಿಯೂ ಸರ್ಕಾರವು ನಿಗದಿತ ಗುರಿಯನ್ನು ತಲುಪುವುದಕ್ಕೆ ಸಾಧ್ಯವೇ ಎಂಬ ಅನುಮಾನಗಳು ಇತ್ತೀಚಿನ ಬೆಳವಣಿಗೆಳಿಂದ ಹುಟ್ಟಿಕೊಳ್ಳುತ್ತಿದೆ.
ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಪೂರೈಕೆ
ದೇಶದಲ್ಲಿ ಮೊದಲು ಅನುಮೋದನೆ ಪಡೆದಿರುವ ಈ ಎರಡು ಲಸಿಕೆಗಳ ವಿತರಣೆ ಈಗಾಗಲೇ ನಡೆಯುತ್ತಿದೆ. ಡಿಸೆಂಬರ್ ವೇಳೆಗೆ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ 37 ಕೋಟಿ ಡೋಸ್ ಕೊವಿಶೀಲ್ಡ್ ಲಸಿಕೆ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯಿಂದ 28.5 ಕೋಟಿ ಡೋಸ್ ಕೊವ್ಯಾಕ್ಸಿನ್ ಲಸಿಕೆಯನ್ನು ಪೂರೈಸಲಾಗುವುದು ಎಂದು ಕಂಪನಿಗಳು ಸ್ಪಷ್ಟಪಡಿಸಿರುವ ಬಗ್ಗೆ ವರದಿಯಾಗಿದೆ.
40 ಕೋಟಿಗೂ ಅಧಿಕ ಜನರಿಗೆ ಕೊವಿಡ್-19 ಲಸಿಕೆ
ಕೊವಿಡ್-19 ನಿಯಂತ್ರಿಸಲು ಲಸಿಕೆ ವಿತರಣೆ ಅಭಿಯಾನ
18 ರಿಂದ 44 ವಯಸ್ಸಿನವರಿಗೆ ಲಸಿಕೆ ನೀಡಲು ಆದ್ಯತೆ
ಭಾರತದಲ್ಲಿ ಎಷ್ಟು ಕಂಪನಿ ಲಸಿಕೆಗಳಿಗೆ ಅನುಮೋದನೆ?
ಭಾರತದಲ್ಲಿ ಒಟ್ಟು ನಾಲ್ಕು ಕಂಪನಿಗಳ ಕೊರೊನಾವೈರಸ್ ಲಸಿಕೆಯ ವಿತರಣೆಗೆ ಅನುಮೋದನೆ ನೀಡಲಾಗಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್, ರಷ್ಯಾದಲ್ಲಿ ಸಂಶೋಧಿಸಿ ಭಾರತದ ರೆಡ್ಡೀಸ್ ಕಂಪನಿ ಜೊತೆಗಿನ ಸಹಭಾಗಿತ್ವದಲ್ಲಿ ಉತ್ಪಾದನೆ ಆಗುತ್ತಿರುವ ಸ್ಪುಟ್ನಿಕ್-ವಿ ಹಾಗೂ ಮಾಡೆರ್ನಾ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ವೈದ್ಯಕೀಯ ಔಷಧೀಯ ನಿಯಂತ್ರಣ ಪ್ರಾಧಿಕಾರವು ಅನುಮೋದನೆ ನೀಡಿದೆ.
ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಎಷ್ಟಿದೆ?
19 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಪರೀಕ್ಷೆ
ದೇಶದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ಸಂಖ್ಯೆ ಹೆಚ್ಚಾದಂತೆ ಸೋಂಕಿತ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 19,36,709 ಜನರ ಮಾದರಿ ಪರೀಕ್ಷೆಗೊಳಪಡಿಸಿದಾಗ 41,157 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ದೇಶದಲ್ಲಿ ಈವರೆಗೂ 44,39,58,663 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.